Home> India
Advertisement

ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ: ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ

ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ. ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಎಂದು ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 

ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಸತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ.  ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ‌ ಬೆದರಿಕೆ ಹಾಕಿದೆ. ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. 

ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ‌ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಅವರು ರಾಹುಲ್ ಗಾಂಧಿ ನಾಲಗೆ ಕತ್ತರಿಸಲು ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ. ಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಲು ಸಿಎಂ‌ ಸಿದ್ದರಾಮಯ್ಯ ಆಗ್ರಹಿಸಿದರು. 

ಇದನ್ನೂ ಓದಿ- ರಾಹುಲ್ ಗಾಂಧಿಯದ್ದು ಮಾನವ ಜಾತಿ: ಯತ್ನಾಳ್ ಮಾತಿಗೆ ವೆಂಕಟೇಶ್ ಗುದ್ದು

ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ. ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಮತ್ತೆ ಬೆದರಿಕೆ ಹಾಕಿದ್ದಾನೆ. ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ ಎಂದವರು ಆರೋಪಿಸಿದರು. 

*ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು.‌ ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು. 
ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು. 

ಇದನ್ನೂ ಓದಿ- ವಾಹನ ಸವಾರರೇ ಎಚ್ಚರ.. ಈ ಟ್ರಾಫಿಕ್ ನಿಯಮ ಪಾಲಿಸದಿದ್ದರೇ ಬೀಳಲಿದೆ 1000 ರೂಪಾಯಿ ದಂಡ !

ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ: 
ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ನುಡಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More