Home> India
Advertisement

Lok Sabha Election Date: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಗೆ ಮುಹೂರ್ತ ಫಿಕ್ಸ್

Lok Sabha Election Date: ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಲು ಸಮಯ ನಿಗದಿಪಡಿಸಿದೆ. ಈ ಕುರಿತಂತೆ ಚುನಾವಣಾ ಆಯೋಗವು ಸಾಮಾಜಿಕ ಮಾಧ್ಯಮದ ಲೈವ್ ಸ್ಟ್ರೀಮ್‌ಗಳ ಮೂಲಕ ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

Lok Sabha Election Date: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಗೆ ಮುಹೂರ್ತ ಫಿಕ್ಸ್

Lok Sabha Election 2024: ಸಾರ್ವರ್ತಿಕ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗ ಮುಹೂರ್ತ ನಿಗದಿಪಡಿಸಿದೆ. ನಾಳೆ (ಮಾರ್ಚ್ 16)  ಮಧ್ಯಾಹ್ನ 3 ಗಂಟೆಗೆ 2024ರ ಸಾರ್ವತ್ರಿಕ ಚುನಾವಣೆಗಳು ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಘೋಷಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. 

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲೈವ್ ಸ್ಟ್ರೀಮ್‌ಗಳ ಮೂಲಕ ನಾಳೆ ಮಧ್ಯಾಹ್ನ 3 ಗಂಟೆಗೆ, ಮಾರ್ಚ್ 16 ರಂದು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.  

ಈ ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ: 
ಸಾರ್ವರ್ತಿಕ ಚುನಾವಣೆ ಜೊತೆಗೆ ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ಕೂಡ ನಡೆಯಲಿದೆ. ಲಭ್ಯವಿರುವ ಮಾಹಿತಿಗಳ ಪ್ರಕಾರ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂನಲ್ಲಿ ಲೋಕಸಭಾ ಚುನಾವಣೆ ಜೊತೆಗೆ ಏಕಕಾಲದಲ್ಲಿ ವಿಧಾನಸಭಾ ಚುನಾವಣೆಗಳು ಕೂಡ ನಡೆಯಬಹುದು ಎಂದು ಹೇಳಲಾಗುತ್ತಿದೆ. 

2024ರ ವರ್ಷಾಂತ್ಯದಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿಯೂ ವಿಧಾನಸಭಾ ಚುನಾವಣೆ ನಡೆಯಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More