Home> India
Advertisement

ಲೋಕಪಾಲ್ ಜಾರಿಗೆ ಆಗ್ರಹಿಸಿ ಅಣ್ಣಾ ಹಜಾರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಯಾವುದೇ ಪಕ್ಷವನ್ನೂ ಪ್ರತಿನಿಧಿಸದೆ, ದೇಶದ ಒಳಿತಿಗಾಗಿ ಉಪವಾಸ ಮಾಡಲಿದ್ದೇನೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.

ಲೋಕಪಾಲ್ ಜಾರಿಗೆ ಆಗ್ರಹಿಸಿ ಅಣ್ಣಾ ಹಜಾರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಮುಂಬೈ: ಲೋಕಪಾಲ್ ರಚನೆ ಮತ್ತು ನೇಮಕಾತಿಗೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮಹಾರಾಷ್ಟ್ರದ ರಾಲೆಗಣ್ ಸಿದ್ಧಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. 

ಲೋಕಾಯುಕ್ತ ಮತ್ತು ಲೋಕಾಯುಕ್ತ ಕಾಯ್ದೆ 2013 ಪ್ರಕಾರ ಭ್ರಷ್ಟಾಚಾರ ನಿಗ್ರಹ ಒಂಬುಡ್ಸ್ ಮನ್ ಮತ್ತು ಲೋಕಾಪಾಲ ನೇಮಕಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ.  ದೇಶವನ್ನು ಸರ್ವಾಧಿಕಾರತ್ವ ಆಡಳಿತಕ್ಕೆ ಒಳಪಡಿಸಲು ಪ್ರಯತ್ನಿಸಲಾಗುತ್ತಿದೆ. ಆದ್ದರಿಂದ ನನ್ನ ಗ್ರಾಮ ರಾಲೆಗಣ್ ಸಿದ್ಧಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದೇನೆ. ಯಾವುದೇ ಪಕ್ಷವನ್ನೂ ಪ್ರತಿನಿಧಿಸದೆ, ದೇಶದ ಒಳಿತಿಗಾಗಿ ಉಪವಾಸ ಮಾಡಲಿದ್ದೇನೆ" ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.

ಈ ಸಂಬಂಧ ಅಣ್ಣಾ ಹಜಾರೆ ಅವರ ಬಹುತೇಕ ಬೇಡಿಕೆಗಳನ್ನು ಸರ್ಕಾರ್ ಈಡೇರಿಸಲಿದೆ. ಹಾಗಾಗಿ ಸತ್ಯಾಗ್ರಹ ಹಮ್ಮಿಕೊಳ್ಳದಂತೆ ಮಹಾರಾಷ್ಟ್ರ ಸಚಿವ ಗಿರೀಶ್ ಮಹಾಜನ್ ಅವರು ಮನವಿ ಮಾಡಿದ್ದಾರೆ. ಆದರೆ, ಇದಕ್ಕೆ ಮಣಿಯದ ಅಣ್ಣಾ ಹಜಾರೆ ಸರ್ಕಾರ ಮಸೂದೆಯನ್ನು ಜಾರಿಗೆ ತರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದಿದ್ದಾರೆ.

Read More