Home> India
Advertisement

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಹಾರಾಷ್ಟ್ರ ಕಾಂಗ್ರೆಸ್ ಹಿರಿಯ ನಾಯಕ ವಿಖೆ ಪಾಟೀಲ್

ಕಾಂಗ್ರೆಸ್ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಹಾರಾಷ್ಟ್ರ ಕಾಂಗ್ರೆಸ್ ಹಿರಿಯ ನಾಯಕ ವಿಖೆ ಪಾಟೀಲ್

ಮುಂಬೈ: ಕಾಂಗ್ರೆಸ್ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದು, ಭಾರತೀಯ ಜನತಾ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ. ಅಲ್ಲದೆ, ಮುಂದೆ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮಹಾರಾಷ್ಟ್ರ ಕ್ಯಾಬಿನೆಟ್ ಸೇರಲಿದ್ದಾರೆ ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. 

ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಹರಿಭಾವು ಬಾಗಡೆ ಅವರನ್ನು ಭೇಟಿ ಮಾಡಿ ರಾಧಾಕೃಷ್ಣ ವಿಖೇ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಪಾಟೀಲ್ ಹೇಳಿದ್ದಾರೆ.

"ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಾನು ಪಕ್ಷದ ಪರವಾಗಿ ಪ್ರಚಾರ ಮಾಡಿಲ್ಲ.  ನಾನು ಹೈಕಮಾಂಡ್ ಅನ್ನು ಅನುಮಾನಿಸುವದಿಲ್ಲ, ಅವರು ನನ್ನನ್ನು ಪ್ರತಿಪಕ್ಷ ನಾಯಕನನ್ನಾಗಿ ಮಾಡುವ ಮೂಲಕ ನನಗೆ ಅವಕಾಶ ನೀಡಿದ್ದರು. ಅಂತೆಯೇ ನಾನು ಒಳ್ಳೆಯ ಕೆಲಸ ಮಾಡಲು ಪ್ರಯತ್ನಿಸಿದ್ದೇನೆ. ಆದರೆ ಪರಿಸ್ಥಿತಿ ನಾನು ರಾಜೀನಾಮೆ ನೀಡುವಂತೆ ಮಾಡಿದೆ" ಎಂದು ರಾಜಿನಾಮೆ ಮಾಡಿದೆ ಎಂದು ರಾಧಾಕೃಷ್ಣ ವಿಖೆ ಪಾಟೀಲ್ ಹೇಳಿದ್ದಾರೆ. 

ಈ ಬೆನ್ನಲ್ಲೇ, ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕ ಅಬ್ದುಲ್ ಸತ್ತಾರ್ ಅವರು ಸಹ ಬಿಜೆಪಿ ಸೇರುವುದಾಗಿ ಹೇಳಿದ್ದಾರೆ.

Read More