Home> India
Advertisement

ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ: ಈ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ..!

ಶುಕ್ರವಾರ ಮಹಾರಾಷ್ಟ್ರದಲ್ಲಿ 1,134 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, 3 ಸಾವುಗಳು ವರದಿಯಾಗಿವೆ. ಹೊಸ ಪ್ರಕರಣಗಳ ಪೈಕಿ 763 ಮುಂಬೈನಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ.

ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ: ಈ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ..!

ನವದೆಹಲಿ: ಮತ್ತೆ ಕೋವಿಡ್ -19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಮಹಾರಾಷ್ಟ್ರದ ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ಮಾಸ್ಕ್ ಧರಿಸುವ ಕಡ್ಡಾಯ ನಿಯಮ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ ಶುರುವಾಗಿದ್ದು, 4ನೇ ಅಲೆಯ ಭೀತಿ ಸಹ ಎದುರಾಗಿದೆ. ಈ ಮಧ್ಯೆ ಮಹಾರಾಷ್ಟ್ರದಲ್ಲಿ ಕೊರೊನಾ ಮತ್ತೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರವು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಮಹಾರಾಷ್ಟ್ರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಪ್ರದೀಪ್ ವ್ಯಾಸ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಸೇರಿದಂತೆ ಹಲವು ಆದೇಶಗಳನ್ನು ನೀಡಿದ್ದಾರೆ.

ಇದನ್ನೂ ಓದಿ: Gas Leak : ಆಂಧ್ರಪ್ರದೇಶದಲ್ಲಿ ಅನಿಲ ಸೋರಿಕೆ : 200 ಮಹಿಳೆಯರು ಅಸ್ವಸ್ಥ!

ರೈಲುಗಳು, ಬಸ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿರುತ್ತದೆ. ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಸರ್ಕಾರದೊಂದಿಗೆ ಸಹಕರಿಸಬೇಕೆಂದು ಅವರು ಹೇಳಿದ್ದಾರೆ.

‘ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದಾಗಿ ಸಾರ್ವಜನಿಕರಿಗೆ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಕಳೆದ 2 ತಿಂಗಳುಗಳಲ್ಲಿ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆಯಾಗಿತ್ತು. ಆದರೆ ಇದೀಗ ಮತ್ತೆ ನಿಧಾನವಾಗಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಮೊದಲ ಬಾರಿಗೆ ದೈನಂದಿನ ಪ್ರಕರಣಗಳು 1,000 ದಾಟಿದೆ. ಮುಂಬೈ ಮೆಟ್ರೋಪಾಲಿಟನ್ ಪ್ರದೇಶ ಮತ್ತು ಥಾಣೆಯಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಉಲ್ಬಣಗೊಳ್ಳುತ್ತಿವೆ. ಇತರ ಜಿಲ್ಲೆಗಳಲ್ಲಿಯೂ ಪ್ರಕರಣಗಳು ಹೆಚ್ಚುವ ಸಾಧ‍್ಯತೆ ಇದೆ’ ಎಂದು ವ್ಯಾಸ್‍ ತಿಳಿಸಿದ್ದಾರೆ.  

ಇದನ್ನೂ ಓದಿ: ಕೇರಳ ಬಳಿಕ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ!

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದ ಇಡೀ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹೀಗಾಗಿ ಆದಷ್ಟು ಪ್ರಕರಣಗಳು ಹೆಚ್ಚಾಗದಂತೆ ನಾವು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಮಹಾರಾಷ್ಟ್ರದಲ್ಲಿ ಇತ್ತೀಚೆಗೆ BA.4 ಮತ್ತು BA.5 ಉಪವಿಭಾಗ ಹೊಂದಿರುವ ರೋಗಿಗಳು ಪತ್ತೆಯಾಗಿದ್ದಾರೆ. ಈ ಪ್ರಕರಣಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಯಿಲ್ಲದಿದ್ದರೂ ನಾವು ಎಚ್ಚರಿಕೆ ವಹಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಶುಕ್ರವಾರ ಮಹಾರಾಷ್ಟ್ರದಲ್ಲಿ 1,134 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, 3 ಸಾವುಗಳು ವರದಿಯಾಗಿವೆ. ಹೊಸ ಪ್ರಕರಣಗಳ ಪೈಕಿ 763 ಮುಂಬೈನಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More