Home> India
Advertisement

ಬಹುಮಹಡಿ ಹೋಟೆಲ್‌ನಲ್ಲಿ ಬೆಂಕಿ ಅವಘಡ; ಹಲವರು ಸಿಲುಕಿರುವ ಶಂಕೆ

ಇಂದೋರ್‌ನ ವಿಜಯನಗರದ ವಾಣಿಜ್ಯ ಪ್ರದೇಶದಲ್ಲಿರುವ ಸುಮಾರು ಐದು ಅಂತಸ್ತಿನ ಈ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ರಕ್ಷಣಾ ತಂಡ ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ಮೂಲಕ ಹೋಟೆಲ್ ನಲ್ಲಿದ್ದ ಸುಮಾರು 12 ಅತಿಥಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಬಹುಮಹಡಿ ಹೋಟೆಲ್‌ನಲ್ಲಿ ಬೆಂಕಿ ಅವಘಡ; ಹಲವರು ಸಿಲುಕಿರುವ ಶಂಕೆ

ಇಂದೋರ್: ಮಧ್ಯಪ್ರದೇಶದ ಇಂದೋರ್‌ನ ಗೋಲ್ಡನ್ ಗೇಟ್ ಹೋಟೆಲ್‌ನಲ್ಲಿ ಸೋಮವಾರ ಬೆಳಿಗ್ಗೆ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಆ ಪ್ರದೇಶದ ನಿವಾಸಿಗಳಲ್ಲಿ ಕೆಲ ಕಾಲ ಆಂತಕ ಸೃಷ್ಟಿಯಾಗಿತ್ತು. 

ಇಂದೋರ್‌ನ ವಿಜಯನಗರದ ವಾಣಿಜ್ಯ ಪ್ರದೇಶದಲ್ಲಿರುವ ಸುಮಾರು ಐದು ಅಂತಸ್ತಿನ ಈ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ರಕ್ಷಣಾ ತಂಡ ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ಮೂಲಕ ಹೋಟೆಲ್ ನಲ್ಲಿದ್ದ ಸುಮಾರು 12 ಅತಿಥಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎನ್ನಲಾಗಿದೆ. 

ಪೊಲೀಸರ ಪ್ರಕಾರ, ಹಲವಾರು ಜನರನ್ನು ರಕ್ಷಿಸಲಾಗಿದ್ದರೂ, ಕಟ್ಟಡದೊಳಗೆ ಮತ್ತಷ್ಟು ಜನ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಹೆಚ್ಚುವರಿ ಹಾನಿಯನ್ನು ತಡೆಯಲು ಮುನ್ನೆಚ್ಚರಿಕಾ ಅಕ್ರಮವಾಗಿ ಆ ಪ್ರದೇಶದಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗಿದೆ. ಬೆಂಕಿ ಅನಾಹುತದಿಂದಾಗಿ ಲಕ್ಷಾಂತರ ಮೌಲ್ಯದ ಆಸ್ತಿ ನಾಶವಾಗಿದೆ. ಆದರೆ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದು ತಿಳಿದಿಲ್ಲ.

Read More