Home> India
Advertisement

ಯಾದವರು ನಮಗೆ ಮತ ನೀಡಿಲ್ಲ ಎಂದು ದೂರಿದ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ

ಇದಕ್ಕೂ ಮೊದಲು ಭಾನುವಾರ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹಲವು ರಾಜ್ಯಗಳ ರಾಜ್ಯ ಅಧ್ಯಕ್ಷರನ್ನು ಹುದ್ದೆಯಿಂದ ವಜಾಗೊಳಿಸಿದ್ದಾರೆ.

ಯಾದವರು ನಮಗೆ ಮತ ನೀಡಿಲ್ಲ ಎಂದು ದೂರಿದ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ಮತ್ತೊಮ್ಮೆ ದೊಡ್ಡ ಬಂಡಾಯದ ಚಿಹ್ನೆಗಳನ್ನು ತೋರಿಸುತ್ತಿದೆ. ಮುಂಬರುವ ವಿಧಾನಸಭೆ ಉಪಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಎಸ್​ಪಿ ಏಕಾಂಗಿಯಾಗಿ ಹೋರಾಟ ನಡೆಸಲಿದೆ. ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲದೆ ಬಿಎಸ್​ಪಿ ಸ್ಪರ್ಧಿಸಲಿದೆ ಎಂದು ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಘೋಷಿಸಿದ್ದಾರೆ. ಉತ್ತರ ಪ್ರದೇಶದಲ್ಲಿ 2019 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ನೀರಸ ಸಾಧನೆಗೆ ಸಮಾಜವಾದಿ ಪಕ್ಷದ ಜೊತೆಗಿನ ಮೈತ್ರಿಯೇ ಕಾರಣ. ಯಾದವರ ಮತಗಳ ವಿಭಜನೆ ತಡೆಯಲು ಅಖಿಲೇಶ್‌ ಯಾದವ್‌ ವಿಫಲರಾದರು. ಎಸ್​ಪಿ-ಬಿಎಸ್​ಪಿ ಮೈತ್ರಿಕೂಟದ ಕಾರ್ಯಕ್ಷಮತೆ ನಿರೀಕ್ಷೆಗಳಿಗೆ ಅನುಗುಣವಾಗಿರಲಿಲ್ಲ ಎಂದು ಮಾಯಾವತಿ ಆರೋಪಿಸಿದ್ದಾರೆ.

ಸೋಮವಾರ ಬಿಎಸ್​ಪಿ ಮುಖಂಡರೊಂದಿಗೆ ಮಾಯಾವತಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಉತ್ತರಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಬಿಎಸ್​ಪಿ ಒಂಟಿಯಾಗಿ ಸ್ಪರ್ಧಿಸುವ ಬಗ್ಗೆ ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನೀರಸ ಸಾಧನೆ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದ್ದು "ಯಾದವರು ನಮಗೆ ಮತ ನೀಡದ ಕಾರಣ" ಮೈತ್ರಿ ವಿಫಲವಾಗಿದೆ ಎಂದು ಚರ್ಚಿಸಲಾಗಿದೆ. ಇದಕ್ಕೂ ಮೊದಲು ಭಾನುವಾರ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹಲವು ರಾಜ್ಯಗಳ ರಾಜ್ಯ ಅಧ್ಯಕ್ಷರನ್ನು ಹುದ್ದೆಯಿಂದ ವಜಾಗೊಳಿಸಿದ್ದಾರೆ.

ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಲೋಕಸಭೆ ಚುನಾವಣೆಯಲ್ಲಿ ಮತಗಳ ವರ್ಗಾವಣೆ ಬಗ್ಗೆ ಪ್ರಶ್ನಿಸಿದರು, ಈ ವೇಳೆ ಮುಖಂಡರು ಚುನಾವಣೆಯಲ್ಲಿ ಬಿಎಸ್​ಪಿ ಮತಗಳು ಸಂಪೂರ್ಣವಾಗಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳಿಗೆ ಹೋಗಿದೆ. ಆದರೆ ಸಮಾಜವಾದಿ ಪಕ್ಷದ ಬೆಂಬಲಿಗರು ಬಿಎಸ್​ಪಿ ಅಭ್ಯರ್ಥಿಗಳಿಗೆ ಹಲವು ಸ್ಥಳಗಳಲ್ಲಿ ಮತ ಚಲಾಯಿಸಲಿಲ್ಲ ಎಂದು ಮಾಹಿತಿ ನೀಡಿದರು. ಒಂದು ರೀತಿಯಲ್ಲಿ, ಸಮಾಜವಾದಿ ಪಕ್ಷ ಮತಗಳ ವರ್ಗಾವಣೆಯಲ್ಲಿ ವಿಫಲವಾಗಿರುವುದನ್ನು ಉಲ್ಲೇಖಿಸಿ ಮಾಯಾವತಿ ಎಸ್​ಪಿ-ಬಿಎಸ್​ಪಿ ಮೈತ್ರಿ ಭವಿಷ್ಯವನ್ನು ಬಹುಮಟ್ಟಿಗೆ ನಿರ್ಧರಿಸಿದ್ದಾರೆ.

Read More