Home> India
Advertisement

'ನಿಮ್ಮ ಸ್ವಂತ ಅಲ್ಪಸಂಖ್ಯಾತರ ಸಮಸ್ಯೆಗಳ ಮೇಲೆ ಕೇಂದ್ರೀಕರಿಸಿ': ಪಾಕ್‌ಗೆ ಭಾರತದ ತಿರುಗೇಟು

ಪಾಕಿಸ್ತಾನ ಸರಕಾರ ಹಾಗೂ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ಮಾಡಿರುವ ಟೀಕೆಗಳಿಗೆ ತಿರುಗೇಟು ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಸೋಮವಾರ ಎರಡು ಅಧಿಕೃತ ಹೇಳಿಕೆಗಳನ್ನು ನೀಡಿದೆ.  

'ನಿಮ್ಮ ಸ್ವಂತ ಅಲ್ಪಸಂಖ್ಯಾತರ ಸಮಸ್ಯೆಗಳ ಮೇಲೆ ಕೇಂದ್ರೀಕರಿಸಿ': ಪಾಕ್‌ಗೆ ಭಾರತದ ತಿರುಗೇಟು

ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವ ಕುರಿತು ಪಾಕಿಸ್ತಾನ ಸರಕಾರ ಹಾಗೂ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ಮಾಡಿರುವ ಟೀಕೆಗಳಿಗೆ ತಿರುಗೇಟು ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಸೋಮವಾರ ಎರಡು ಅಧಿಕೃತ ಹೇಳಿಕೆಗಳನ್ನು ನೀಡಿದೆ. ಪಾಕಿಸ್ತಾನ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: IIFA 2022: ಕೆಂಪು ಗೌನ್‌ನಲ್ಲಿ ಮಿಂಚಿದ ದಿವ್ಯಾ ಖೋಸ್ಲಾ ಕುಮಾರ್ 

ತನ್ನದೇ ದೇಶದಲ್ಲಿ ಅಲ್ಪಸಂಖ್ಯಾತರ ಕಿರುಕುಳದ ವಿಷಯದ ಬಗ್ಗೆ ಗಮನಹರಿಸುವಂತೆ ಪಾಕಿಸ್ತಾನ ಸರ್ಕಾರವನ್ನು ಕೇಳಿರುವ MEA, "ನಾವು ಪಾಕಿಸ್ತಾನದ ಹೇಳಿಕೆಗಳು ಮತ್ತು ಕಾಮೆಂಟ್‌ಗಳನ್ನು ಗಮನಿಸಿದ್ದೇವೆ. ಭಾರತ ಸರ್ಕಾರವು ಎಲ್ಲಾ ಧರ್ಮಗಳಿಗೆ ಅತ್ಯುನ್ನತ ಗೌರವವನ್ನು ನೀಡುತ್ತದೆ" ಎಂದಿದೆ.

ಕಳೆದ ವಾರ ಇಬ್ಬರು ಬಿಜೆಪಿ ನಾಯಕರು ಪ್ರವಾದಿ ಮೊಹಮ್ಮದ್ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗಳಿಗೆ ಗಲ್ಫ್ ಮತ್ತು ಇಸ್ಲಾಮಿಕ್ ರಾಷ್ಟ್ರಗಳ ಪ್ರತಿಕ್ರಿಯೆಗಳಿಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆಗಳನ್ನು ನೀಡಲಾಗಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ನೂಪುರ್ ಶರ್ಮಾ ಅವರು ಟಿವಿ ಚರ್ಚೆಯೊಂದರಲ್ಲಿ ಪ್ರವಾದಿಯವರ ಬಗ್ಗೆ ಕೆಲವು ಆಕ್ಷೇಪಾರ್ಹ ವಿಷಯಗಳನ್ನು ಹೇಳಿದ್ದರು ಮತ್ತು ನವೀನ್‌ ಕುಮಾರ್‌ ಜಿಂದಾಲ್ ಅವರು ಪ್ರವಾದಿಯನ್ನು ಅವಮಾನಿಸುವ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದರು. ಈ ಕಾಮೆಂಟ್‌ಗಳು ರಾಷ್ಟ್ರ ಮತ್ತು ಪ್ರಪಂಚದಾದ್ಯಂತ ಭಾರೀ ಟೀಕೆಗೆ ಗುರಿಯಾಗಿವೆ. 

ಇದನ್ನೂ ಓದಿ: Norovirus: ಕರೋನಾ ಮತ್ತು ಮಂಕಿಪಾಕ್ಸ್‌ನ ಭೀತಿಯ ನಡುವೆ ಭಾರತಕ್ಕೆ ಹೊಸ ವೈರಸ್ ಬೆದರಿಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More