Home> India
Advertisement

ಪರೀಕ್ಷಾ ಪೇ ಚರ್ಚಾ: ಜನವರಿ 29ರಂದು ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ಆಸಕ್ತ ವಿದ್ಯಾರ್ಥಿಗಳು MyGov.In ವೆಬ್ಸೈಟ್ ನಲ್ಲಿ ನೋಂದಣಿ ಮಾಡಿಕೊಂಡು, 'ಪರೀಕ್ಷಾ ಪೇ ಚರ್ಚಾ' ಸ್ಪರ್ಧೆಯಲ್ಲಿ ಭಾಗವಹಿಸಿ ದೆಹಲಿಯ ಟಾಕಟೋರಾ ಕ್ರೀಡಾಂಗಣದಲ್ಲಿ ಪ್ರಧಾನಮಂತ್ರಿಯೊಂದಿಗೆ ನಡೆಯಲಿರುವ ಸಂವಾದದಲ್ಲಿ ಪಾಲ್ಗೊಳ್ಳಬಹುದು. 

ಪರೀಕ್ಷಾ ಪೇ ಚರ್ಚಾ: ಜನವರಿ 29ರಂದು ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ನವದೆಹಲಿ: ಜನವರಿ 29 ರಂದು 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷೆ ಮತ್ತು ಒತ್ತಡಗಳ ಕುರಿತು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ  ಸಂವಾದ ನಡೆಸಲಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು MyGov.In ವೆಬ್ಸೈಟ್ ನಲ್ಲಿ ನೋಂದಣಿ ಮಾಡಿಕೊಂಡು, 'ಪರೀಕ್ಷಾ ಪೇ ಚರ್ಚಾ' ಸ್ಪರ್ಧೆಯಲ್ಲಿ ಭಾಗವಹಿಸಿ ದೆಹಲಿಯ ಟಾಕಟೋರಾ ಕ್ರೀಡಾಂಗಣದಲ್ಲಿ ಪ್ರಧಾನಮಂತ್ರಿಯೊಂದಿಗೆ ನಡೆಯಲಿರುವ ಸಂವಾದದಲ್ಲಿ ಪಾಲ್ಗೊಳ್ಳಬಹುದು. 

ಈ ಸ್ಪರ್ಧೆಯಲ್ಲಿ 9 ರಿಂದ 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು, ಪದವೀಧರರು, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಮತ್ತು ಅವರ ಶಿಕ್ಷಕರು, ಪೋಷಕರು ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಜನವರಿ 29 ರಂದು ಟಾಕಟೊರಾ ಕ್ರೀಡಾಂಗಣದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
 
Read More