Home> India
Advertisement

ಪ್ರಧಾನಿ ಮೋದಿ ಮತ್ತು ಶಾ ಹಿಂದೂ ಮತ್ತು ಮುಸ್ಲಿಂರ ನಡುವೆ ಒಡಕು ಮೂಡಿಸುತ್ತಿದ್ದಾರೆ- ಕನ್ನಯ್ಯ ಕುಮಾರ್

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ದೇಶದ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಒಡಕು ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯತ್ನಿಸುತ್ತಿದ್ದಾರೆ ಎಂದು ಭಾರತದ ಕಮ್ಯುನಿಸ್ಟ್ ಪಕ್ಷದ ಮುಖಂಡ ಕನ್ಹಯ್ಯ ಕುಮಾರ್ ಆರೋಪಿಸಿದ್ದಾರೆ.

 ಪ್ರಧಾನಿ ಮೋದಿ ಮತ್ತು ಶಾ ಹಿಂದೂ ಮತ್ತು ಮುಸ್ಲಿಂರ ನಡುವೆ ಒಡಕು ಮೂಡಿಸುತ್ತಿದ್ದಾರೆ- ಕನ್ನಯ್ಯ ಕುಮಾರ್

ನವದೆಹಲಿ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ದೇಶದ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಒಡಕು ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯತ್ನಿಸುತ್ತಿದ್ದಾರೆ ಎಂದು ಭಾರತದ ಕಮ್ಯುನಿಸ್ಟ್ ಪಕ್ಷದ ಮುಖಂಡ ಕನ್ಹಯ್ಯ ಕುಮಾರ್ ಆರೋಪಿಸಿದ್ದಾರೆ.

"ಮೋದಿ ಮತ್ತು ಷಾ ಗುಜರಾತ್ ಚುನಾವಣೆಯ ಸಮಯದಲ್ಲಿ ಹಿಂದೂ ಮತ್ತು ಮುಸ್ಲಿಮರ ನಡುವೆ ಸಂಘರ್ಷವನ್ನು ಸೃಷ್ಟಿಸುತ್ತಿದ್ದರು. ಈಗ ಅವರು ದೇಶಾದ್ಯಂತ ಅದೇ ತಂತ್ರವನ್ನು ಅನುಸರಿಸುತ್ತಿದ್ದಾರೆ" ಎಂದು ಕನ್ನಯ್ಯ ಕುಮಾರ್ ಮಹಾರಾಷ್ಟ್ರದ ಪರಭಾನಿ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಕನ್ಹಯ್ಯ ಕುಮಾರ್ ಅವರು ಧಾರ್ಮಿಕ ಸಂಘರ್ಷಗಳನ್ನು ಬದಿಗಿಟ್ಟು ಬದಲಾಗಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಆರ್ಥಿಕತೆಯ ಕಳಪೆ ಸ್ಥಿತಿಯಂತಹ ವಿಷಯಗಳ ಬಗ್ಗೆ ಕೇಂದ್ರ ಗಮನಸೆಳೆಯಬೇಕೆಂದು ಮನವಿ ಮಾಡಿದರು. "ಜನರು ದೇಶವನ್ನು ಪೀಡಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದಾಗ, ಅದು ಅವರ ಪೌರತ್ವವನ್ನು ಪ್ರಶ್ನಿಸುವ ಮೂಲಕ ಪ್ರತಿಕ್ರಿಯಿಸುತ್ತದೆ. ಪೌರತ್ವ ತಿದ್ದುಪಡಿ ಕಾಯ್ದೆಯ ಮೂಲಕ, ಸರ್ಕಾರವು ಈಗಾಗಲೇ ದೇಶದಲ್ಲಿ ಉಲ್ಬಣಗೊಳ್ಳುತ್ತಿರುವ ಬೆಂಕಿಗೆ ಇಂಧನವನ್ನು ಸೇರಿಸುತ್ತಿದೆ" ಎಂದು ಅವರು ಹೇಳಿದರು. ಈ ವಿವಾದಾತ್ಮಕ ಕಾನೂನು ಜನರಿಗೆ ಪೌರತ್ವ ನೀಡುವುದರ ಬದಲಾಗಿ ಅದನ್ನು ಕಸಿದುಕೊಳ್ಳುವುದರ ಬಗ್ಗೆ ಹೆಚ್ಚು ಒತ್ತು ನೀಡುತ್ತದೆ ಎಂದರು.

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಮುಸ್ಲಿಮೇತರ ವಲಸಿಗರು ಭಾರತೀಯ ಪ್ರಜೆಗಳಾಗಲು ಸುಲಭವಾಗುವಂತೆ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದ ನಂತರ ಕಳೆದ ಡಿಸೆಂಬರ್‌ನಿಂದ ದೇಶವು ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ಕಾನೂನು ದೇಶದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿಯೊಂದಿಗೆ ಜಾರಿಗೆ ಬಂದಾಗ ದೇಶದ ಮುಸ್ಲಿಂ ಸಮುದಾಯಕ್ಕೆ ಅಪಾಯವನ್ನುಂಟು ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

"ಸರ್ಕಾರ ತನ್ನ ವಿಭಜನೆ ತಂತ್ರದಿಂದ ಹೊರಬರದಿದ್ದರೆ, ಈ ದೇಶವನ್ನು ಮತ್ತು ಅದರ ಸಂವಿಧಾನವನ್ನು ಪ್ರೀತಿಸುವ ಎಲ್ಲ ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಲಿದ್ದಾರೆ " ಎಂದು ಅವರು ಎಚ್ಚರಿಸಿದರು.

Read More