Home> India
Advertisement

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕದ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. 

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದೆಲ್ಲೆಡೆ ಇಂದು 63ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕದ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂದಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ. 

ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರೂ ಸಹ ಟ್ವೀಟ್ ಮಾಡಿದ್ದು, ಮುಂಬರುವ ವರ್ಷಗಳಲ್ಲಿ ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶ ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ಹಾರೈಸಿದ್ದಾರೆ. 

Read More