Home> India
Advertisement

ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ಖಾತೆಗಳ ಹಂಚಿಕೆ; ರಾಷ್ಟ್ರಪತಿ ಅಂಕಿತ

ಕೇಂದ್ರ ಸಚಿವ ಹೆಚ್.ಎನ್.ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ಖಾತೆಗಳ ಜವಾಬ್ದಾರಿಯನ್ನು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ನರೇಂದ್ರ ಸಿಂಗ್ ತೋಮರ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. 

ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ಖಾತೆಗಳ ಹಂಚಿಕೆ; ರಾಷ್ಟ್ರಪತಿ ಅಂಕಿತ

ನವದೆಹಲಿ: ಅನಾರೋಗ್ಯದಿಂದ ಕಾರಣದಿಂದ ನಿಧನರಾದ ಕೇಂದ್ರ ಸಚಿವ ಹೆಚ್.ಎನ್.ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ಖಾತೆಗಳ ಜವಾಬ್ದಾರಿಯನ್ನು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ನರೇಂದ್ರ ಸಿಂಗ್ ತೋಮರ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. 
 

ಕೇಂದ್ರ ಸಚಿವ ಅನಂತ್​ ಕುಮಾರ್​ ನಿರ್ವಹಿಸುತ್ತಿದ್ದ ರಾಸಾಯನಿಕ, ರಸಗೊಬ್ಬರ ಖಾತೆಯನ್ನು ಡಿ.ವಿ.ಸದಾನಂದ ಗೌಡರಿಗೆ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್​ ರಾಜ್​, ಗಣಿ ಖಾತೆಗಳನ್ನು ನಿರ್ವಹಿಸುತ್ತಿರುವ ನರೇಂದ್ರ ಸಿಂಗ್​ ತೋಮರ್‌ಗೆ ಸಂಸದೀಯ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ.

ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸ್ಸಿಗೆ ರಾಷ್ಟಪತಿ ರಾಮನಾಥ್​ ಕೋವಿಂದ್​ ಅಂಕಿತ ಹಾಕಿದ್ದಾರೆ.

Read More