Home> India
Advertisement

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಜೊತೆಗೆ ಸಮಾಲೋಚನೆಗೆ ಮುಂದಾದ ಬಿಜೆಪಿ

ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರಪತಿ ಚುನಾವಣೆಯ ಕುರಿತು ಇತರ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚಿಸಲು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಅಧಿಕಾರ ನೀಡಿದೆ. ಜೆಪಿ ನಡ್ಡಾ ಮತ್ತು ರಾಜನಾಥ್ ಸಿಂಗ್ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ಯುಪಿಎ ಘಟಕಗಳೊಂದಿಗೆ ಹಾಗೂ ಇತರ ಪಕ್ಷಗಳ ಜೊತೆಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಪ್ರಕಟಿಸಿದೆ.

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಜೊತೆಗೆ ಸಮಾಲೋಚನೆಗೆ ಮುಂದಾದ ಬಿಜೆಪಿ

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರಪತಿ ಚುನಾವಣೆಯ ಕುರಿತು ಇತರ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚಿಸಲು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಅಧಿಕಾರ ನೀಡಿದೆ. ಜೆಪಿ ನಡ್ಡಾ ಮತ್ತು ರಾಜನಾಥ್ ಸಿಂಗ್ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ಯುಪಿಎ ಘಟಕಗಳೊಂದಿಗೆ ಹಾಗೂ ಇತರ ಪಕ್ಷಗಳ ಜೊತೆಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಪ್ರಕಟಿಸಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಯೇತರ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಜಂಟಿ ಸಭೆಯನ್ನು ಕೋರಿ ಪತ್ರ ಬರೆದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಎಂಟು ಮುಖ್ಯಮಂತ್ರಿಗಳು ಮತ್ತು ಸೋನಿಯಾ ಗಾಂಧಿ, ಲಾಲು ಪ್ರಸಾದ್ ಯಾದವ್, ಶರದ್ ಪವಾರ್ ಮತ್ತು ಅಖಿಲೇಶ್ ಯಾದವ್ ಸೇರಿದಂತೆ 14 ಪ್ರತಿಪಕ್ಷದ ನಾಯಕರಿಗೆ ತನ್ನ ಆಹ್ವಾನದಲ್ಲಿ ಮಮತಾ ಬ್ಯಾನರ್ಜೀ ವಿಭಜಕ ಶಕ್ತಿಗಳ ವಿರುದ್ಧ ಬಲವಾದ ಮತ್ತು ಪರಿಣಾಮಕಾರಿ ವಿರೋಧದ ಜೊತೆಗೆ ಒಗ್ಗಟ್ಟಿನ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು.

ಇದನ್ನೂ ಓದಿ: ವಾರಾಂತ್ಯದ ಟ್ರಿಪ್‌ಗೆ ರಾಷ್ಟ್ರ ರಾಜಧಾನಿಯ ಈ ಸ್ಥಳಗಳು ಬೆಸ್ಟ್‌ 

ರಾಷ್ಟ್ರಪತಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ, ವಿಭಜಕ ಶಕ್ತಿಗಳ ವಿರುದ್ಧ ಪ್ರಬಲ ಮತ್ತು ಪರಿಣಾಮಕಾರಿ ವಿರೋಧದ ಉಪಕ್ರಮದೊಂದಿಗೆ ಪಶ್ಚಿಮ ಬಂಗಾಳದ ಗೌರವಾನ್ವಿತ ಸಿಎಂ ಮಮತಾ ಬ್ಯಾನರ್ಜಿ ಜಂಟಿ ಸಭೆಯಲ್ಲಿ ಭಾಗವಹಿಸಲು ವಿರೋಧ ಪಕ್ಷದ ಸಿಎಂಗಳು ಮತ್ತು ನಾಯಕರನ್ನು ತಲುಪಿದ್ದಾರೆ.ಈ ವಿಚಾರವಾಗಿ ಅವರು ಈಗಾಗಲೇ ಪತ್ರವನ್ನು ಬರೆದಿದ್ದು, ಜೂನ್ 15 ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ ಎಂದು ಟಿಎಂಸಿ ಹೇಳಿದೆ.ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರತಿಪಕ್ಷ ನಾಯಕರ ಸಭೆಯಿಂದ ಹೊರಗುಳಿಯಲಿದ್ದಾರೆ, ಆದರೆ ಶಿವಸೇನೆಯ ಹಿರಿಯ ನಾಯಕರೊಬ್ಬರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ವಕ್ತಾರ ಸಂಜಯ್ ರಾವುತ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Early Marriage Tips: ವಿವಾಹ ಯೋಗ ಕೂಡಿ ಬರುತ್ತಿಲ್ಲವೇ? ಇಂದೇ ಈ ಉಪಾಯ ಅನುಸರಿಸಿ

ರಾಷ್ಟ್ರಪತಿ ಚುನಾವಣೆ 2022: 

ಭಾರತದ ಮುಂದಿನ ರಾಷ್ಟ್ರಪತಿಯನ್ನು ಚುನಾಯಿಸುವ ಚುನಾವಣೆಯು ಜುಲೈ 18, 2022 ರಂದು ನಡೆಯಲಿದೆ.ಮತದಾನದ ಸಮಯದಲ್ಲಿ, ಸಂಸದರು ಮತ್ತು ಶಾಸಕರನ್ನು ಒಳಗೊಂಡ 4,809 ಮತದಾರರು ಪ್ರಸ್ತುತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಉತ್ತರಾಧಿಕಾರಿಯನ್ನು ನಿರ್ಧರಿಸಲು ಮತ ಚಲಾಯಿಸುತ್ತಾರೆ, ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳುತ್ತದೆ. ಜೂನ್ 15ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜುಲೈ 18ರಂದು ಮತದಾನ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ಈಗ ಲೋಕಸಭೆ, ರಾಜ್ಯಸಭೆ ಮತ್ತು ಹಲವು ರಾಜ್ಯಗಳ ವಿಧಾನಸಭೆಗಳಲ್ಲಿ ಬಿಜೆಪಿ ತನ್ನ ಪ್ರಸ್ತುತ ಬಲದೊಂದಿಗೆ ಸುಲಭವಾಗಿ ಗೆಲ್ಲಬಹುದು ಎನ್ನಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.  

 

 

Read More