Home> India
Advertisement

ಕುತೂಹಲ ಕೆರಳಿಸಿದ ರಾಜ್ ಠಾಕ್ರೆ, ಸೋನಿಯಾ ಗಾಂಧಿ ಭೇಟಿ

ಸೋಮವಾರ ದೆಹಲಿಯಲ್ಲಿ ಮಹಾರಾಷ್ಟ್ರದ ನಾಯಕ ರಾಜ್ ಠಾಕ್ರೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮೈತ್ರಿ  ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಕುತೂಹಲ ಕೆರಳಿಸಿದ ರಾಜ್ ಠಾಕ್ರೆ, ಸೋನಿಯಾ ಗಾಂಧಿ ಭೇಟಿ

ನವದೆಹಲಿ: ಸೋಮವಾರ ದೆಹಲಿಯಲ್ಲಿ ಮಹಾರಾಷ್ಟ್ರದ ನಾಯಕ ರಾಜ್ ಠಾಕ್ರೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮೈತ್ರಿ  ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
 

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರನ್ನು ಭೇಟಿ ಮಾಡಲು ಮಹಾರಾಷ್ಟ್ರ ನವನಿರ್ಮಾನ್ ಸೇನಾದ ರಾಜ್ ಠಾಕ್ರೆ ದೆಹಲಿಗೆ ಆಗಮಿಸಿದ್ದರು, ಇದೇ ವೇಳೆ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎವಿಎಂ ಬದಲು ಬ್ಯಾಲೆಟ್ ಪತ್ರಗಳನ್ನು ಬಳಸಲು ಮನವಿ ಮಾಡಿಕೊಂಡಿದ್ದಾರೆ. ಇತ್ತೀಚಿಗೆ ಲೋಕಸಭಾ ಚುನಾವಣೆಯಲ್ಲಿ ರಾಜ್ ಠಾಕ್ರೆಯವರ ಪಕ್ಷವು ಸ್ಪರ್ಧಿಸಿದ್ದಿರಲಿಲ್ಲ, ಆದಾಗ್ಯೂ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ವಿರುದ್ಧ ಕಿಡಿ ಕಾರಿದ್ದರು.

ಮಹಾರಾಷ್ಟ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪಕ್ಷವು ಎನ್ಸಿಪಿಯೊಂದಿಗೆ ಮೈತ್ರಿಯನ್ನು ಹೊಂದಿದೆ. ಆದರೆ ಠಾಕ್ರೆಯವರ ಉತ್ತರ ಭಾರತದವರ ವಲಸೆ ವಿರೋಧಿ ನೀತಿಯಿಂದಾಗಿ ಅಧಿಕೃತವಾಗಿ ಮೈತ್ರಿ ಮಾಡಿಕೊಳ್ಳಲು ಆಸಕ್ತಿ ತೋರುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ. ವಿಶೇಷವೆಂದರೆ ರಾಜ್ ಠಾಕ್ರೆ ಅವರು ಎರಡನೇ ಬಾರಿಗೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡುತ್ತಿದ್ದಾರೆ. ಇದಕ್ಕೂ ಮೊದಲು ಅವರು ತಮ್ಮ ಮಗನ ಮದುವೆ ಆಹ್ವಾನ ನೀಡಿದ್ದರು. ಆದರೆ ಅವರಿಗೆ ಭಾಗವಹಿಸಲು ಸಾಧ್ಯವಾಗಿರಲಿಲ್ಲ. 
 

Read More