Home> India
Advertisement

Raksha Bandhan 2021: ದೇಶದ ಜನತೆಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ‘ರಕ್ಷಾ ಬಂಧನ’ದ ಶುಭಾಶಯ

ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿ ಅನೇಕ ಗಣ್ಯರು ರಕ್ಷಾ ಬಂಧನದ ಶುಭಾಶಯ ಕೋರಿದ್ದಾರೆ.

Raksha Bandhan 2021: ದೇಶದ ಜನತೆಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ‘ರಕ್ಷಾ ಬಂಧನ’ದ ಶುಭಾಶಯ

ನವದೆಹಲಿ: ಪ್ರತಿವರ್ಷದಂತೆ ಈ ವರ್ಷವೂ ರಕ್ಷಾಬಂಧನದ ಉತ್ಸವ ನಡೆಯುತ್ತಿದೆ. ಇಂದು(ಆಗಸ್ಟ್ 22) ದೇಶದಾದ್ಯಂತ ರಕ್ಷಾ ಬಂಧನ(Raksha Bandhan 2021)ದ ಹಬ್ಬವನ್ನು ಆಚರಿಸಲಾಗುತ್ತಿದೆ. ಅಣ್ಣ-ತಂಗಿಯರ ಮಧುರ ಸಂಬಂಧಕ್ಕೆ ಸಾಕ್ಷಿಯಾಗಿರುವ ಆಚರಣೆಯಿದು. ಸಹೋದರರು-ಸಹೋದರಿಯರ ಬಾಂಧವ್ಯವನ್ನು ರಕ್ಷಾ ಬಂಧನ ಮತ್ತಷ್ಟು ಗಟ್ಟಿಗೊಳಿಸುತ್ತದೆ. ಈ ಹಿನ್ನೆಲೆ ದೇಶದ ಜನತೆಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ರಕ್ಷಾ ಬಂಧನದ ಶುಭಾಶಯ ತಿಳಿಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ರಕ್ಷಾ ಬಂಧನ ಹಬ್ಬದ ಸಂದರ್ಭದಲ್ಲಿ ಟ್ವೀಟ್ ಮೂಲಕ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಇನ್ನಿಲ್ಲ

‘ಪವಿತ್ರ ರಕ್ಷಾ ಬಂಧನದ ದಿನದ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯಗಳು’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕೂಡ ರಕ್ಷಾ ಬಂಧನದ ಶುಭಾಶಯ ಕೋರಿದ್ದಾರೆ. ‘ರಕ್ಷಾ ಬಂಧನ ಹಬ್ಬವು ಅಣ್ಣ-ತಂಗಿಯರ ನಡುವಿನ ಪ್ರೀತಿ ಹಾಗೂ ಗೌರವದ ವಿಶೇಷ, ಆಳವಾದ ಬಾಂಧವ್ಯದ ಸಂಭ್ರಮಾಚರಣೆ. ಈ ಪವಿತ್ರ ದಿನದಂದು ಮಹಿಳೆಯರ ಘನತೆ ಎತ್ತಿ ಹಿಡಿಯುವ ಮತ್ತು ಅವರಿಗೆ ಸದಾ ಗೌರವ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡೋಣ’ ಎಂದು ಉಪರಾಷ್ಟ್ರಪತಿಗಳು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

‘ಪವಿತ್ರ ರಕ್ಷಾ ಬಂಧನದ ದಿನದಂದು ದೇಶವಾಸಿಗಳಿಗೆ ಶುಭಾಶಯಗಳು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಕೂಡ ನಾಡಿನ ಜನತೆಗೆ ರಕ್ಷಾ ಬಂಧನದ ಶುಭಾಶಯಗಳನ್ನು ತಿಳಿಸಿದ್ದಾರೆ. ‘ನಾಡಿನ ಸಮಸ್ತ ಜನತೆಗೆ ಸಾಮರಸ್ಯ ಹಾಗೂ ಸಹೋದರತ್ವದ ಪ್ರತೀಕವಾದ ಪವಿತ್ರ ರಕ್ಷಾಬಂಧನದ ಹಾರ್ದಿಕ  ಶುಭಾಶಯಗಳು. ಈ ಹಬ್ಬವು ಎಲ್ಲರ ಬಾಳಿನಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ತರಲಿಯೆಂದು ಹಾರೈಸುತ್ತೇನೆ’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮುಂಬೈನಲ್ಲಿ ಬಿಜೆಪಿ ವಿರುದ್ಧ 17 ಹೊಸ FIR ದಾಖಲು!

‘ನಾಡಿನ ಎಲ್ಲ ಸಹೋದರ-ಸಹೋದರಿಯರಿಗೆ ಪವಿತ್ರ ರಕ್ಷಾಬಂಧನ ಸಂಭ್ರಮದ ಹಾರ್ದಿಕ ಶುಭಕಾಮನೆಗಳು. ಭ್ರಾತೃತ್ವದ ಸುಮಧುರ ಬಾಂಧವ್ಯ ಗಟ್ಟಿಗೊಳ್ಳಲಿ, ರಕ್ಷಾಬಂಧನದ ನಂಟು ಎಲ್ಲರ ಬಾಳಿನಲ್ಲಿ ಸಂತಸದ ಹೊನಲನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ’ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Read More