Home> India
Advertisement

ಛತ್ತೀಸ್‌ಗಢದ ಮಾಜಿ ಸಿಎಂ ರಮಣ್ ಸಿಂಗ್ ಗುರುಗ್ರಾಮ್‌ನಲ್ಲಿ ಆಸ್ಪತ್ರೆಗೆ ದಾಖಲು

ತೀವ್ರ ಎದೆ ನೋವಿನಿಂದ ಬಳಲುತ್ತಿದ್ದ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರನ್ನು ಗುರುಗ್ರಾಮ್‌ನ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಛತ್ತೀಸ್‌ಗಢದ ಮಾಜಿ ಸಿಎಂ ರಮಣ್ ಸಿಂಗ್ ಗುರುಗ್ರಾಮ್‌ನಲ್ಲಿ ಆಸ್ಪತ್ರೆಗೆ ದಾಖಲು

ಗುರುಗ್ರಾಮ್: ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರನ್ನು ಮಂಗಳವಾರ ರಾತ್ರಿ ಗುರುಗ್ರಾಮ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.

ನಿನ್ನೆ ರಾತ್ರಿ 11 ಗಂಟೆಗೆ ಸಿಂಗ್ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರನ್ನು ಗುರುಗ್ರಾಮ್‌ನ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ಯಾಸ್ಟ್ರೋಎಂಟರಾಲಜಿ ತಜ್ಞ ರಾಜೇಶ್ ಪುರಿ ರಮಣ್ ಸಿಂಗ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ.

ಕಳೆದ ಎರಡು ದಿನಗಳಿಂದ ಬಿಜೆಪಿ ನಾಯಕ ದೆಹಲಿಯಲ್ಲಿದ್ದರು. ಜುಲೈ 22 ರಂದು ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು ಎಂದು ಎಎನ್ಐ ವರದಿ ಮಾಡಿದೆ.
 

Read More