Home> India
Advertisement

ಕಾಶ್ಮೀರಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸುಪ್ರೀಂ ಸೂಚನೆ

ಈಗಾಗಲೇ ನಡೆದಿರುವ ಕಾಶ್ಮೀರಿಗಳ ಹಲ್ಲೆ ಕುರಿತಾದ ವರದಿಗಳ ಬಗ್ಗೆ ರಾಜ್ಯಗಳ ಪ್ರತಿಕ್ರಿಯೆಯನ್ನು ಬಯಸುವ ಮೂಲಕ  ಈ ವಿಚಾರದಲ್ಲಿ ಕೋರ್ಟ್​ ಮಧ್ಯ ಪ್ರವೇಶಿಸಬೇಕು ಎಂಬ ಕೇಂದ್ರದ ಮನವಿಯನ್ನು ಕೋರ್ಟ್​ ಪುರಸ್ಕರಿಸಿದೆ.

ಕಾಶ್ಮೀರಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸುಪ್ರೀಂ ಸೂಚನೆ

ನವದೆಹಲಿ: ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕಾಶ್ಮೀರಿಗಳ ಮೇಲಿನ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು 11 ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. 

ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ತಡೆಗಟ್ಟುವುದರ ಬಗ್ಗೆ ಸೂಚನೆ ನೀಡಿರುವ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್, ಉತ್ತರಾಖಂಡ, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಮೇಘಾಲಯ, ಛತ್ತೀಸಗಢ, ಪಶ್ಚಿಮ ಬಂಗಾಳ , ದೆಹಲಿ ಮತ್ತು ರಾಷ್ಟ್ರ ರಾಜಧಾನಿ ವಲಯ (ಎನ್‍ಸಿಆರ್)ಗಳಿಗೆ ನೋಟಿಸ್ ಜಾರಿ ಮಾಡಿದೆ.

ಎಲ್ಲ 11 ರಾಜ್ಯಗಳ ಡಿಜಿಪಿಗಳು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಚ್ ನಿರ್ದೇಶನ ನೀಡಿದ್ದು, ಆಯಾ ರಾಜ್ಯಗಳಲ್ಲಿರುವ ಕಾಶ್ಮೀರಿಗಳ ಭದ್ರತೆ ಆಯಾ ರಾಜ್ಯ ಸರ್ಕಾರದ್ದೇ ಆಗಿರುತ್ತದೆ. ಅವರ ಮೇಲೆ ಹಲ್ಲೆ ಬೆದರಿಕೆ ಮತ್ತು ಸಾಮಾಜಿಕ ಬಹಿಷ್ಕಾರದಂತಹ ಕೃತ್ಯಗಳಿಂದ ಅವರನ್ನು ರಕ್ಷಿಸುವುದು ರಾಜ್ಯ ಸರ್ಕಾರಗಳ ಹೊಣೆಯಾಗಿರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ನೇತೃತ್ವದ ಸಾಂವಿಧಾನಿಕ ಪೀಠ ತಿಳಿಸಿದೆ.

ಈಗಾಗಲೇ ನಡೆದಿರುವ ಕಾಶ್ಮೀರಿಗಳ ಹಲ್ಲೆ ಕುರಿತಾದ ವರದಿಗಳ ಬಗ್ಗೆ ರಾಜ್ಯಗಳ ಪ್ರತಿಕ್ರಿಯೆಯನ್ನು ಬಯಸುವ ಮೂಲಕ  ಈ ವಿಚಾರದಲ್ಲಿ ಕೋರ್ಟ್​ ಮಧ್ಯ ಪ್ರವೇಶಿಸಬೇಕು ಎಂಬ ಕೇಂದ್ರದ ಮನವಿಯನ್ನು ಕೋರ್ಟ್​ ಪುರಸ್ಕರಿಸಿದೆ.
 
Read More