Home> India
Advertisement

ಬದ್ಗಾಮ್: ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹತ್ಯೆ

ಪೊಲೀಸ್ ಮೂಲಗಳ ಪ್ರಕಾರ ಮೃತ ಉಗ್ರರು ವಿದೇಶಿಯರಾಗಿದ್ದು, ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸದಸ್ಯರು ಎಂದು ಶಂಕಿಸಲಾಗಿದೆ. 

ಬದ್ಗಾಮ್: ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯ ಚಿತ್ತರ್ಗಾಮ್ ನ ಸುತ್ಸುಕಲಾ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಮೃತ ಉಗ್ರರು ವಿದೇಶಿಯರಾಗಿದ್ದು, ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸದಸ್ಯರು ಎಂದು ಶಂಕಿಸಲಾಗಿದೆ. ಸುತ್ಸು ಗ್ರಾಮದಲ್ಲಿ ಮೂವರು ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಕೆಹ್ ನೀಡಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಇಬ್ಬರನ್ನು ಎನ್ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದೆ. ಮತ್ತೊಬ್ಬ ಉಗ್ರನಿಗಾಗಿ ಹುಡುಕಾಟ ಮುಂದುವರೆದಿದೆ.

ಜಮ್ಮುಕಾಶ್ಮೀರದ ಶೋಫಿಯಾನ್ ಮತ್ತು ಕುಪ್ವಾರ ಜಿಲ್ಲೆಗಳಲ್ಲಿ ಗುರುವಾರ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರು ಹತ್ಯೆಯಾಗಿದ್ದರು. 

Read More