Home> India
Advertisement

ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಏಳು ಮಂದಿ ಸಾವು, ಇಬ್ಬರಿಗೆ ಗಾಯ

ಕಾರಿನಲ್ಲಿ ಕುಳಿತಿದ್ದ ಒಂಬತ್ತು ಜನರಲ್ಲಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಾರು-ಟ್ರಕ್ ನಡುವೆ ಭೀಕರ ಅಪಘಾತ: ಏಳು ಮಂದಿ ಸಾವು, ಇಬ್ಬರಿಗೆ ಗಾಯ

ಗ್ವಾಲಿಯರ್: ಶನಿವಾರ ಬೆಳಿಗ್ಗೆ ಗ್ವಾಲಿಯರ್ ಸಮೀಪದ ಟೋಲ್ ಪ್ಲಾಜಾದಲ್ಲಿ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮೂಲಗಳ ಪ್ರಕಾರ, ಮಾರುತಿ ವ್ಯಾನ್ ಚಾಲಕ ನಿಯಂತ್ರಣ ಕಳೆದುಕೊಂಡರು ಟ್ರಕ್ ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳೂ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. 

ಕಾರಿನಲ್ಲಿ ಕುಳಿತಿದ್ದ ಒಂಬತ್ತು ಜನರಲ್ಲಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏತನ್ಮಧ್ಯೆ, ಟ್ರಕ್ ಚಾಲಕರ ಅಪಘಾತದ ಬಳಿಕ ಪರಾರಿಯಾಗಿದ್ದಾನೆ.  

ಮೃತರು ಡಬ್ರಾ, ಲಕ್ಷ್ಮಣಪುರದವರು ಎನ್ನಲಾಗಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More