Home> India
Advertisement

ಡೊಂಕು ಬಾಲ ಸರಿಪಡಿಸಲು ಸಮಯ ಬೇಕಾಗುತ್ತದೆ: ಪಾಕಿಸ್ತಾನದ ಬಗ್ಗೆ ವಿ.ಕೆ.ಸಿಂಗ್ ಪ್ರತಿಕ್ರಿಯೆ

ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿದೆ. ಇದಕ್ಕೆ ಭಾರತೀಯ ಸೇನೆ ತೀಕ್ಷ್ಣವಾಗಿಯೇ ಪ್ರತ್ಯುತ್ತರ ನೀಡಲು ಸದಾ ಸಿದ್ಧವಿದ್ದು, ಅಗತ್ಯವಿದ್ದಾಗೆಲ್ಲಾ ಕ್ರಮ ಕೈಗೊಂಡಿದೆ ಎಂದು ಜನರಲ್ ವಿ.ಕೆಸಿಂಗ್ ಹೇಳಿದ್ದಾರೆ.

ಡೊಂಕು ಬಾಲ ಸರಿಪಡಿಸಲು ಸಮಯ ಬೇಕಾಗುತ್ತದೆ: ಪಾಕಿಸ್ತಾನದ ಬಗ್ಗೆ ವಿ.ಕೆ.ಸಿಂಗ್ ಪ್ರತಿಕ್ರಿಯೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆಯ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ವಿ.ಕೆ.ಸಿಂಗ್, ಡೊಂಕು ಬಾಲವನ್ನು ನೆರಗೊಳಿಸಲು ಸಮಯ ಬೇಕಾಗುತ್ತದೆ ಎಂದಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿದೆ. ಇದಕ್ಕೆ ಭಾರತೀಯ ಸೇನೆ ತೀಕ್ಷ್ಣವಾಗಿಯೇ ಪ್ರತ್ಯುತ್ತರ ನೀಡಲು ಸದಾ ಸಿದ್ಧವಿದ್ದು, ಅಗತ್ಯವಿದ್ದಾಗೆಲ್ಲಾ ಕ್ರಮ ಕೈಗೊಂಡಿದೆ ಎಂದು ಹೇಳಿದರು. 

ಕುಪ್ವಾರಾದ ತಂಗ್‌ಧಾರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ನಡೆಸಿದ ದಾಳಿಯಲ್ಲಿ ಇಬ್ಬರು ಭಾರತೀಯ ಸೈನಿಕರು ಮತ್ತು ಒಬ್ಬ ನಾಗರಿಕ ಸಾವನ್ನಪ್ಪಿದ ಬಳಿಕ ಭಾರತೀಯ ಸೇನೆಯು ಪ್ರತಿದಾಳಿ ನಡೆಸಿ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ. 
 

Read More