Home> India
Advertisement

ಬಿಜೆಪಿ ಸೋಲಿಸಲು ಎಸ್ಪಿ-ಬಿಎಸ್ಪಿ ಮೈತ್ರಿಯೇ ಸಾಕು, ನಿಮ್ಮ ಅಗತ್ಯವಿಲ್ಲ: ಕಾಂಗ್ರೆಸ್ ವಿರುದ್ಧ ಮಾಯಾವತಿ ವಾಗ್ದಾಳಿ

ಉತ್ತರಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲು ಮುಕ್ತವಾಗಿರಬೇಕು ಎಂದು ಮಾಯಾವತಿ ವ್ಯಂಗ್ಯವಾಡಿದ್ದಾರೆ. 

ಬಿಜೆಪಿ ಸೋಲಿಸಲು ಎಸ್ಪಿ-ಬಿಎಸ್ಪಿ ಮೈತ್ರಿಯೇ ಸಾಕು, ನಿಮ್ಮ ಅಗತ್ಯವಿಲ್ಲ: ಕಾಂಗ್ರೆಸ್ ವಿರುದ್ಧ ಮಾಯಾವತಿ ವಾಗ್ದಾಳಿ

ಲಕ್ನೋ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಸ್ಪಿ-ಬಿಎಸ್ಪಿ ಮೈತ್ರಿಯೇ ಸಾಕು, ನಿಮ್ಮ ಅಗತ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಕಾಂಗ್ರೆಸ್ ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಯಾವತಿ, ಉತ್ತರಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲು ಮುಕ್ತವಾಗಿರಬೇಕು ಎಂದು ಮಾಯಾವತಿ ವ್ಯಂಗ್ಯವಾಡಿದ್ದಾರೆ. ಉತ್ತರಪ್ರದೇಶದ 80 ಲೋಕಸಭಾ ಕ್ಷೇತ್ರಗಳಲ್ಲಿ 7 ಕ್ಷೇತ್ರಗಳನ್ನು ಸಮಾಜವಾದಿ ಪಕ್ಷ (ಎಸ್ಪಿ), ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮತ್ತು ರಾಷ್ಟ್ರೀಯ ಲೋಕ ದಳ(ಆರ್ಎಲ್ಡಿ) ಪಕ್ಷಗಳಿಗೆ ಬಿಟ್ಟುಕೊಡುತ್ತಿರುವುದಾಗಿ ಭಾನುವಾರ ಕಾಂಗ್ರೆಸ್ ಘೋಷಿಸಿತ್ತು. 

"ಉತ್ತರಪ್ರದೇಶದಲ್ಲಿ ಎಲ್ಲಾ 80 ಲೋಕಸಭಾ ಸ್ಥಾನಗಳಿಗೂ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಕ್ತವಾಗಿದೆ.  ಎಸ್ಪಿ-ಬಿಎಸ್ಪಿ ಮೈತ್ರಿ ಬಿಜೆಪಿಯನ್ನು ಸೋಲಿಸುವ ಸಾಮರ್ಥ್ಯವನ್ನು ಹೊಂದಿದೆ. ಹಾಗಾಗಿ ಕಾಂಗ್ರೆಸ್ ಪಕ್ಷ 7 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಎಸ್ಪಿ-ಬಿಎಸ್ಪಿ ಮೈತ್ರಿಗೆ ಬಿಟ್ಟುಕೊಡುತ್ತಿರುವುದಾಗಿ ವದಂತಿ ಹಬ್ಬಿಸುವ ಅಗತ್ಯವಿಲ್ಲ" ಎಂದು ಮಾಯಾವತಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಉತ್ತರಪ್ರದೇಶ ಸೇರಿದಂತೆ ಇತರ ಯಾವುದೇ ರಾಜ್ಯದಲ್ಲಿ ಬಿಎಸ್ಪಿ ಕಾಂಗ್ರೆಸ್ನೊಂದಿಗೆ ಮೈತ್ರಿ ಹೊಂದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ. "ಉತ್ತರ ಪ್ರದೇಶ ಮತ್ತು ದೇಶದ ಇತರ ಯಾವುದೇ ರಾಜ್ಯಗಳಲ್ಲಿ ಕಾಂಗ್ರೆಸ್ ಜೊತೆ ನಾವು ಯಾವುದೇ ರೀತಿಯ ಮೈತ್ರಿ ಅಥವಾ ಒಪ್ಪಂದ ಮಾಡಿಕೊಂಡಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ. ನಮ್ಮ ಜನರು ಕಾಂಗ್ರೆಸ್ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದೆ ಎಚ್ಚರಿಕೆಯಿಂದಿರಿ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಎಸ್ಪಿ-ಬಿಎಸ್ಪಿ-ಆರ್ಎಲ್ಡಿ ಮೈತ್ರಿ ಸಮರ್ಥವಾಗಿದೆ" ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.

Read More