Home> India
Advertisement

ವಾರಣಾಸಿಯಲ್ಲಿ ಮೋದಿ ವಿರುದ್ಧ ಮಾಜಿ ಯೋಧನನ್ನು ಕಣಕ್ಕಿಳಿಸಿದ ಎಸ್ಪಿ-ಬಿಎಸ್ಪಿ ಮೈತ್ರಿಕೂಟ

ಪ್ರಧಾನಿ ಮೋದಿ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ಮಾಜಿ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ನನ್ನು ಕಣಕ್ಕಿಳಿಸಿದೆ.

ವಾರಣಾಸಿಯಲ್ಲಿ ಮೋದಿ ವಿರುದ್ಧ ಮಾಜಿ ಯೋಧನನ್ನು ಕಣಕ್ಕಿಳಿಸಿದ ಎಸ್ಪಿ-ಬಿಎಸ್ಪಿ ಮೈತ್ರಿಕೂಟ

ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ಮಾಜಿ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ನನ್ನು ಕಣಕ್ಕಿಳಿಸಿದೆ.

ಇಗ ಕಣಕ್ಕಿಳಿದಿರುವ ಮಾಜಿ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಈ ಹಿಂದೆ ಸೈನ್ಯದಲ್ಲಿ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗುತ್ತದೆ ಎಂದು ಆರೋಪಿಸಿದ್ದರು.ಈ ಹಿನ್ನಲೆಯಲ್ಲಿ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.ಈಗ ಮೈತ್ರಿಕೂಟದ ಅಭ್ಯರ್ಥಿಯಾಗಿ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತೇಜ್ ಬಹದ್ದೂರ್ ಯಾದವ್ " ನಾನು ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ ಹಿನ್ನಲೆಯಲ್ಲಿ ನನ್ನನ್ನು ವಜಾಗೊಳಿಸಲಾಗಿದೆ. ಆದ್ದರಿಂದ ನನ್ನ ಏಕೈಕ ಉದ್ದೇಶವೆಂದರೆ ಭ್ರಷ್ಟಾಚಾರವನ್ನು ನಿವಾರಿಸುವುದು" ಎಂದು ಯಾದವ್ ತಿಳಿಸಿದ್ದಾರೆ. 

ಇದಕ್ಕೂ ಮೊದಲು ಎಸ್ಪಿ-ಬಿಎಸ್ಪಿ ಮೈತ್ರಿಕೂಟವು ಶಾಲಿನಿ ಯಾದವ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದರೆ ಕಾಂಗ್ರೆಸ್ ಪಕ್ಷವು ಅಜಯ್ ರೈ ರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು. 2017 ರಲ್ಲಿ ತೇಜ್ ಬಹದ್ದೂರ್ ಯಾದವ್ ಅವರು ಸೈನ್ಯದಲ್ಲಿ ಕಳಪೆ ಮಟ್ಟದ ಆಹಾರವನ್ನು ನೀಡಲಾಗುತ್ತದೆ ಎಂದು ಆರೋಪಿಸಿ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.  ಇದಾದ ನಂತರ ಅವರನ್ನು ಸೈನ್ಯದಿಂದ ವಜಾಗೊಳಿಸಲಾಗಿತ್ತು.

Read More