Home> India
Advertisement

COVID-19: ಕೋವಿಡ್ ಭೀತಿ ಹಿನ್ನೆಲೆ ರಾಜ್ಯಗಳಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

COVID-19: ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸಲು ಸಲಹೆ ನೀಡಿದೆ. ಜೊತೆಗೆ ಪರೀಕ್ಷೆಯನ್ನು ಹೆಚ್ಚಿಸಿ ಮತ್ತು ಆಸ್ಪತ್ರೆಯ ಮೂಲಸೌಕರ್ಯವನ್ನು ಸಿದ್ಧವಾಗಿರಿಸಿಕೊಳ್ಳುವಂತೆ ಸೂಚಿಸಿದೆ. ಜೀನೋಮ್ ಅನುಕ್ರಮವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜ್ಯಗಳಿಗೆ ಕೇಂದ್ರವು ತಿಳಿಸಿದೆ.

COVID-19: ಕೋವಿಡ್ ಭೀತಿ ಹಿನ್ನೆಲೆ ರಾಜ್ಯಗಳಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಕೋವಿಡ್ ಭೀತಿ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪತ್ರ ಬರೆಯುವ ಮೂಲಕ ಕೊರೊನಾ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಎಲ್ಲಾ ರಾಜ್ಯಗಳು ಎಚ್ಚರಿಕೆ ವಹಿಸುವಂತೆ ಸಚಿವಾಲಯ ತಿಳಿಸಿದೆ.

ಮುಂಬರುವ ಹಬ್ಬ-ಹರಿದಿನಗಳು ಮತ್ತು ಹೊಸ ವರ್ಷದ ಆಚರಣೆಗಳನ್ನು ಗಮನದಲ್ಲಿಟ್ಟುಕೊಂಡು 'ಟೆಸ್ಟ್-ಟ್ರ್ಯಾಕ್-ಟ್ರೀಟ್ ಮತ್ತು ವ್ಯಾಕ್ಸಿನೇಷನ್' ಮೇಲೆ ಕೇಂದ್ರೀಕರಿಸಲು ಈ ಪತ್ರದಲ್ಲಿ ರಾಜ್ಯಗಳಿಗೆ ಸೂಚಿಸಲಾಗಿದೆ. ಮಾಸ್ಕ್ ಧರಿಸಲು, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಮತ್ತು ದೈಹಿಕ ಅಂತರವನ್ನು ಕಾಪಾಡಿಕೊಳ್ಳಲು ರಾಜ್ಯಗಳ ಜನರಿಗೆ ಮನವಿ ಮಾಡಿದೆ.

ಇದನ್ನೂ ಓದಿಕೊರೊನಾ ಪರೀಕ್ಷೆ ಇಲ್ಲದೆ ತಾಜಮಹಲ್ ಗೆ ಇಲ್ಲ ಎಂಟ್ರಿ...!

ಈ ಬಗ್ಗೆ ಮಾತನಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ರಾಜ್ಯಗಳಿಗೆ ಜಾಗರೂಕರಾಗಿರಬೇಕು ಮತ್ತು ಕೋವಿಡ್ -19 ನಿರ್ವಹಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಲಹೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯಗಳು ಕಳೆದ ಬಾರಿ ಕೊರೊನಾ ಪ್ರಕರಣಗಳ ಉಲ್ಬಣದ ಸಮಯದಲ್ಲಿ ಮಾಡಿದಂತೆ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕಾಗಿದೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸಲು ಸಲಹೆ ನೀಡಿದೆ. ಜೊತೆಗೆ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿ ಮತ್ತು ಆಸ್ಪತ್ರೆಯ ಮೂಲಸೌಕರ್ಯವನ್ನು ಸಿದ್ಧವಾಗಿರಿಸಿಕೊಳ್ಳುವಂತೆ ಹೇಳಿದೆ. ಜೀನೋಮ್ ಅನುಕ್ರಮವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜ್ಯಗಳಿಗೆ ಕೇಂದ್ರವು ಸೂಚಿಸಿದೆ.  

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಮೆಸ್ಸಿ, ಎಂಬಪ್ಪೆಯಾದ ರಾಹುಲ್ ಗಾಂಧಿ, ಖರ್ಗೆ..!

ಜ್ವರದಂತಹ ಲಕ್ಷಣಗಳು ಕಂಡುಬಂದಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಉತ್ಸವಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸಲು, ಈವೆಂಟ್ ಸಂಘಟಕರು, ರೆಸ್ಟೋರೆಂಟ್‌ಗಳು ಇತ್ಯಾದಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಿ, ಅವರಿಗೆ ವಿಧಾನಗಳನ್ನು ತಿಳಿಸುವಂತೆ ಹೇಳಲಾಗಿದೆ. ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೊರೊನಾ ಅಬ್ಬರ ಶುರುವಾಗಿದ್ದು, ತುಂಬಾ ಎಚ್ಚರಿಕೆ ವಹಿಸುವಂತೆ ದೇಶದ ಜನರಿಗೆ ಕೇಂದ್ರವು ಮನವಿ ಮಾಡಿಕೊಂಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More