Home> India
Advertisement

ಸೋನಿಯಾ ಗಾಂಧಿಗೆ ಸಮನ್ಸ್: ಇಡಿ ವಿರುದ್ಧ ಪ್ರತಿಭಟಿಸುತ್ತಿದ್ದ ರಾಹುಲ್ ಗಾಂಧಿ ವಶಕ್ಕೆ

ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಎರಡನೇ ಸುತ್ತಿನ ವಿಚಾರಣೆಗಾಗಿ ಸೋನಿಯಾ ಗಾಂಧಿ ಮಂಗಳವಾರ ನವದೆಹಲಿಯ ಇಡಿ ಕಚೇರಿಗೆ ತೆರಳಿದ್ದಾರೆ. 

ಸೋನಿಯಾ ಗಾಂಧಿಗೆ ಸಮನ್ಸ್: ಇಡಿ ವಿರುದ್ಧ ಪ್ರತಿಭಟಿಸುತ್ತಿದ್ದ ರಾಹುಲ್ ಗಾಂಧಿ ವಶಕ್ಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿಯವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ. ಈ ವಿಚಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ರಂಜೀತ್ ರಂಜನ್, ಕೆಸಿ ವೇಣುಗೋಪಾಲ್, ಮಾಣಿಕಂ ಠಾಗೋರ್, ಇಮ್ರಾನ್ ಪ್ರತಾಪಗಢಿ ಮತ್ತು ಕೆ ಸುರೇಶ್ ಸೇರಿದಂತೆ ಪಕ್ಷದ ಇತರ ನಾಯಕರನ್ನು ಸಹ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: World's Most Expensive Mobiles : ಇವು ಜಗತ್ತಿನ ಅತ್ಯಂತ ದುಬಾರಿ ಟಾಪ್-5 ಫೋನ್‌ಗಳು : ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!

ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಎರಡನೇ ಸುತ್ತಿನ ವಿಚಾರಣೆಗಾಗಿ ಸೋನಿಯಾ ಗಾಂಧಿ ಮಂಗಳವಾರ ನವದೆಹಲಿಯ ಇಡಿ ಕಚೇರಿಗೆ ತೆರಳಿದ್ದಾರೆ. 

ಜುಲೈ 21 ರಂದು ಇಡಿ ಎರಡು ಗಂಟೆಗಳ ಕಾಲ ಸೋನಿಯಾ ಅವರನ್ನು ವಿಚಾರಣೆ ನಡೆಸಿತ್ತು. ಆದರೆ ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಅವರ ಕೋರಿಕೆಯ ಮೇರೆಗೆ ದಿನದ ಅಧಿವೇಶನವನ್ನು ಕೊನೆಗೊಳಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

 

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ವ್ಯವಹಾರಗಳ ಬಗ್ಗೆ ತನಿಖೆ ನಡೆಸಲು, ಸೋನಿಯಾ ಮತ್ತು ರಾಹುಲ್ ಗಾಂಧಿಯವರ ತೆರಿಗೆ ಮೌಲ್ಯಮಾಪನವನ್ನು ನಡೆಸಲು ಆದಾಯ ತೆರಿಗೆ ಇಲಾಖೆಗೆ ವಿಚಾರಣಾ ನ್ಯಾಯಾಲಯವು ಅನುಮತಿ ನೀಡಿದೆ.

ಇದನ್ನೂ ಓದಿ: Good News: ಹಸುವಿನ ಸಗಣಿಯಿಂದ ರೈತರ ಆದಾಯ ಹೆಚ್ಚಳಕ್ಕೆ ಮಹತ್ವದ ಹೆಜ್ಜೆ ಇಟ್ಟ ಮೋದಿ ಸರ್ಕಾರ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಸೋನಿಯಾ ಗಾಂಧಿಯವರು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು 2013 ರಲ್ಲಿ ಸಲ್ಲಿಸಿದ ಅರ್ಜಿ ಇದಾಗಿದ್ದು, ತನಿಖೆ ಇಂದಿಗೂ ನಡೆಯುತ್ತಿದೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More