Home> India
Advertisement

ನರೇಂದ್ರ ಮೋದಿ ಆಯ್ಕೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಇಂದು ಪ್ರಕಟ

ಮುಖ್ಯನ್ಯಾಯಮೂರ್ತಿ ಎಸ್‌.ಎ. ಬೋಬಡೆ (SA Bobde) ಅವರನ್ನು ಒಳಗೊಂಡಿರುವ ತ್ರಿಸದಸ್ಯ ಪೀಠವು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ತ್ರಿಸದಸ್ಯ ಪೀಠವು ನವೆಂಬರ್ 18ರಂದು ವಿಚಾರಣೆಯನ್ನು ಮುಗಿಸಿ ತೀರ್ಪನ್ನು ಕಾದಿರಿಸಿತ್ತು.

ನರೇಂದ್ರ ಮೋದಿ ಆಯ್ಕೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಇಂದು ಪ್ರಕಟ

ವಾರಣಾಸಿ: ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಆಯ್ಕೆ ಆಗಿರುವುದನ್ನು ಪ್ರಶ್ನಿಸಿ ಬಿಎಸ್‌ಎಫ್ ಮಾಜಿ ಯೋಧ ತೇಜ್ ಬಹದ್ದೂರ್ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಇಂದು ಸುಪ್ರೀಂ ಕೋರ್ಟ್ (Supreme Court) ತೀರ್ಪು ಪ್ರಕಟಿಸಲಿದೆ.

ಮುಖ್ಯನ್ಯಾಯಮೂರ್ತಿ ಎಸ್‌.ಎ. ಬೋಬಡೆ (SA Bobde) ಅವರನ್ನು ಒಳಗೊಂಡಿರುವ ತ್ರಿಸದಸ್ಯ ಪೀಠವು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ತ್ರಿಸದಸ್ಯ ಪೀಠವು ನವೆಂಬರ್ 18ರಂದು ವಿಚಾರಣೆಯನ್ನು ಮುಗಿಸಿ ತೀರ್ಪನ್ನು ಕಾದಿರಿಸಿತ್ತು.

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ಪರವಾಗಿ ಹಿರಿಯ ನ್ಯಾಯವಾದಿ ಹರೀಶ್ ಸಾಳ್ವೆ ಹಾಗೂ ತೇಜ್‌ ಬಹದ್ದೂರ್‌ ಅವರ ಪರವಾಗಿ ವಕೀಲ ಪ್ರದೀಪ್‌ ಯಾದವ್‌ ವಾದ ಮಂಡನೆ ಮಾಡಿದ್ದರು.

G20 Summit: ಭಾರತ ಪ್ಯಾರಿಸ್ ಒಪ್ಪಂದದ ಗುರಿಗಳನ್ನು ಮೀರಿದೆ-ಪ್ರಧಾನಿ ನರೇಂದ್ರ ಮೋದಿ

ಪ್ರಕರಣದ ಹಿನ್ನೆಲೆ :
2019ರ ಲೋಕಸಭಾ ಚುನಾವಣೆಯಲ್ಲಿ (2019 Lok Sabha elections) ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಬಿಎಸ್‌ಎಫ್‌ (BSF)ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ಮತ್ತು ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಇನ್ನೊಂದು ಒಟ್ಟು ಎರಡು ನಾಮಪತ್ರ ಸಲ್ಲಿಸಿದ್ದರು. ಇವರನ್ನು ಬಿಎಸ್‌ಎಫ್‌ನಿಂದ 2017ರಲ್ಲಿ ವಜಾ ಮಾಡಲಾಗಿತ್ತು. ಆದರೆ ಇವರು 'ತಮ್ಮನ್ನು ಬಿಎಸ್‌ಎಫ್‌ ಭ್ರಷ್ಟಾಚಾರದ ಆರೋಪದ ಮೇಲೆ ವಜಾ ಮಾಡಿಲ್ಲ' ಎಂದು ದೃಢೀಕರಿಸುವ ಪ್ರಮಾಣಪತ್ರವನ್ನು ಸಲ್ಲಿಸಿರಲಿಲ್ಲ. ಇದೇ ಕಾರಣಕ್ಕೆ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರವನ್ನು ಚುನಾವಣಾ ಅಧಿಕಾರಿಗಳು ಅಸಿಂಧುಗೊಳಿಸಿದ್ದರು.

fallbacks

ತೇಜ್ ಬಹದೂರ್ ನಾಮಪತ್ರ ರದ್ದು: ಚುನಾವಣಾ ಆಯೋಗಕ್ಕೆ ಉತ್ತರಿಸುವಂತೆ 'ಸುಪ್ರೀಂ' ಆಜ್ಞೆ

ತಮ್ಮ ನಾಮಪತ್ರವನ್ನು ತಿರಸ್ಕಾರ‌ ಮಾಡಿದ ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ತೇಜ್ ಬಹದ್ದೂರ್ ಯಾದವ್ ಅವರು ಮೊದಲು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿಯು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ತಮ್ಮ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಅಗತ್ಯ ಪ್ರಮಾಣಪತ್ರ ಪಡೆದುಕೊಳ್ಳಲು ಸಮಯಾವಕಾಶವನ್ನೇ ನೀಡಲಿಲ್ಲ ಎಂದು ದೂರಿದ್ದರು. ಆದುದರಿಂದ ನರೇಂದ್ರ ಮೋದಿ ಅವರ ಆಯ್ಕೆಯನ್ನು ರದ್ದು ಮಾಡಬೇಕು ಎಂದು ಮನವಿ ಮಾಡಿದ್ದರು. ಈ ಅರ್ಜಿ ಅಲಹಾಬಾದ್ ಹೈಕೋರ್ಟಿನಲ್ಲಿ ವಜಾ ಆಗಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ತೇಜ್ ಬಹದ್ದೂರ್ ಯಾದವ್ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

ಮುಂದಿನ 5 ವರ್ಷಗಳಲ್ಲಿ ಭಾರತದ ತೈಲ ಸಂಸ್ಕರಣ ಸಾಮರ್ಥ್ಯ ದ್ವಿಗುಣಗೊಳ್ಳಲಿದೆ-ಪ್ರಧಾನಿ ಮೋದಿ

ಚುನಾವಣಾ ಆಯೋಗದ ಅಧಿಕಾರಿಗಳು ಅಧಿಕಾರ ದುರುಪಯೋಗ ಪಡಿಸಿಕೊಂಡು ನಾಮಪತ್ರ ತಿರಸ್ಕಾರ ಮಾಡಿರುವ ಬಗ್ಗೆ ಸಾಕ್ಷ್ಯ ಒದಗಿಸುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರ ತೇಜ್ ಬಹದ್ದೂರ್ ಯಾದವ್ ಗೆ ಸೂಚಿಸಿತ್ತು. ತೇಜ್‌ ಬಹದ್ದೂರ್‌ ಪರ ವಕೀಲ ಪ್ರದೀಪ್‌ ಯಾದವ್‌ ಸಮಯಾವಕಾಶ ಕೋರಿದ್ದರಿಂದ 4 ಬಾರಿ ವಿಚಾರಣೆಯನ್ನು ಮುಂದೂಡಲಾಗಿತ್ತು. ಅವರು ನವೆಂಬರ್ 18ರಂದು ಮತ್ತೊಂದು ಬಾರಿ ಕಾಲವಕಾಶ ಕೋರಿದ್ದರು. ಅರ್ಜಿದಾರರ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟಿನ‌ ತ್ರಿಸದಸ್ಯ ಪೀಠವು ವಿಚಾರಣೆ ಮುಗಿಸಿ ತೀರ್ಪನ್ನು ಕಾಯ್ದಿರಿಸಿತ್ತು.
 

Read More