Home> India
Advertisement

ಅಯೋಧ್ಯೆ ತೀರ್ಪನ್ನು ವಿಭಿನ್ನವಾಗಿ ಸ್ವಾಗತಿಸಿದ ಆದಿತ್ಯ ಠಾಕ್ರೆ

ಶಿವಸೇನೆಯ ಯುವ ಮುಖಂಡ ಆದಿತ್ಯ ಠಾಕ್ರೆ ಸುಪ್ರೀಂಕೋರ್ಟ್ ತೀರ್ಪನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ಸ್ವಾಗತಿಸಿದ್ದಾರೆ.

ಅಯೋಧ್ಯೆ ತೀರ್ಪನ್ನು ವಿಭಿನ್ನವಾಗಿ ಸ್ವಾಗತಿಸಿದ ಆದಿತ್ಯ ಠಾಕ್ರೆ

ನವದೆಹಲಿ: ಅಯೋಧ್ಯೆ ಪ್ರಕರಣಕ್ಕೆ(Ayodhya Case)  ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ರಾಮನ ದೇವಾಲಯದ ಬಗ್ಗೆ ಐವರು ನ್ಯಾಯಾಧೀಶರು ಸರ್ವಾನುಮತದ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿ ರಾಮನ ದೇವಾಲಯ ನಿರ್ಮಿಸಲು ಹಸಿರು ನಿಶಾನೆ ತೋರಿದ್ದಾರೆ. ಇದೇ ವೇಳೆ ಅಯೋಧ್ಯೆಯಲ್ಲಿಯೇ ಮುಸ್ಲಿಮರಿಗೆ ಬೇರೆಡೆ 5 ಎಕರೆ ಭೂಮಿ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ. 

ಅಯೋಧ್ಯೆ ತೀರ್ಪಿನ ಬಳಿಕ ಹಲವು ನಾಯಕರು ಮತ್ತು ಸಾರ್ವಜನಿಕರು ತಮ್ಮ ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ.

ಶಿವಸೇನೆಯ ಯುವ ಮುಖಂಡ ಆದಿತ್ಯ ಠಾಕ್ರೆ ಸುಪ್ರೀಂಕೋರ್ಟ್ ತೀರ್ಪನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ಸ್ವಾಗತಿಸಿದ್ದಾರೆ. ತೀರ್ಪಿನ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದ ಅವರು ತಮ್ಮ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ' ಜೈ ಶ್ರೀ ರಾಮ್' ಎಂದು ಬರೆದಿದ್ದಾರೆ.

ಮತ್ತೊಂದೆಡೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, "ಹಲವಾರು ದಶಕಗಳ ವಿವಾದದ ಬಗ್ಗೆ ಇಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ನ್ಯಾಯಾಲಯದ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ವರ್ಷಗಳ ವಿವಾದ ಇಂದು ಕೊನೆಗೊಂಡಿದೆ. ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ನಾನು ಎಲ್ಲರಲ್ಲಿ ಮನವಿ ಮಾಡುತ್ತೇನೆ" ಎಂದರು.

Read More