Home> India
Advertisement

ಗ್ರಾಮೀಣ ಮತ್ತು ನಗರ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ..!

ಎನ್ ಡಿ ಎ ಮೈತ್ರಿಕೂಟ ಸರ್ಕಾರದ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ತಮ್ಮ ಮೊದಲ ಸಂಪುಟ ಸಭೆಯನ್ನು ನಡೆಸಿದ್ದಾರೆ.ಈ ಸಭೆಯಲ್ಲಿ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟದ ಮೊದಲ ನಿರ್ಧಾರವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಮತ್ತು ನಗರ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಿದ್ದಾರೆ.

ಗ್ರಾಮೀಣ ಮತ್ತು ನಗರ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ..!

ನವದೆಹಲಿ: ಎನ್ ಡಿ ಎ ಮೈತ್ರಿಕೂಟ ಸರ್ಕಾರದ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ತಮ್ಮ ಮೊದಲ ಸಂಪುಟ ಸಭೆಯನ್ನು ನಡೆಸಿದ್ದಾರೆ.ಈ ಸಭೆಯಲ್ಲಿ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟದ ಮೊದಲ ನಿರ್ಧಾರವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಮತ್ತು ನಗರ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಿದ್ದಾರೆ.

ಇದನ್ನೂ ಓದಿ: 'ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮೊದಲ ಆರೋಪಿ' - ಆರ್‌.ಅಶೋಕ

ಇಂದು ಬೆಳಗ್ಗೆ ಪ್ರಧಾನಿ ಮೋದಿ ಅವರು ಸುಮಾರು 9.3 ಕೋಟಿ ರೈತರಿಗೆ ಸುಮಾರು ₹ 20,000 ಕೋಟಿ ಬಿಡುಗಡೆ ಮಾಡಲು ಅಧಿಕಾರ ನೀಡುವ ತಮ್ಮ ಮೊದಲ ಕಡತಕ್ಕೆ ಸಹಿ ಹಾಕಿದರು. ಹೊಸ ಮತ್ತು ಹಳೆಯ ಮೂವತ್ತು ಕ್ಯಾಬಿನೆಟ್ ಸಚಿವರು ನಿನ್ನೆ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸ್ವತಂತ್ರ ಉಸ್ತುವಾರಿ ಹೊಂದಿರುವ ಐದು ರಾಜ್ಯ ಸಚಿವರು ಮತ್ತು 36 ಕಿರಿಯ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಿದರು.

ಈಗ ಎನ್ ಡಿಎ ಮೈತ್ರಿಕೂಟದ ಪಕ್ಷಗಳಾದ ಏಕನಾಥ್ ಶಿಂಧೆ ಅವರ ಶಿವಸೇನೆ, ಅಜಿತ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಮತ್ತು ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ ಮಹತ್ವದ ಹುದ್ದೆಗಳಿಗಾಗಿ ಬೇಡಿಕೆ ಇಟ್ಟಿರುವುದರಿಂದಾಗಿ ಈಗ ಪ್ರಧಾನಿ ನೇತೃತ್ವದ ಸಂಪುಟದ ಸಭೆ ಮಹತ್ವವನ್ನು ಪಡೆದಿದೆ.

ಇದನ್ನೂ ಓದಿ: ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಿಸಿದ್ದು ಹೇಗೆ..? ವಿವರ ನೀಡಿದ ಜಾರ್ಜ್‌

ಒಂದೆಡೆ ಇದುವರೆಗೆ ಶಿವಸೇನೆಗೆ ಕೇವಲ ಒಂದೇ ಸಚಿವ ಸ್ಥಾನ ನೀಡಿರುವುದಕ್ಕೆ ಜೊತೆ ಕೇವಲ ಒಂದು ಸ್ಥಾನವನ್ನು ಗೆದ್ದಿರುವ ಅಜಿತ್ ಪವಾರ್ ಅವರ ಪಕ್ಷವು, ಸ್ವತಂತ್ರ ಉಸ್ತುವಾರಿಯೊಂದಿಗೆ ಕಿರಿಯ ಸಚಿವ ಸ್ಥಾನದ ಬಿಜೆಪಿ ಪ್ರಸ್ತಾಪದಿಂದ ಅಸಮಾಧಾನಗೊಂಡಿದೆ.ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಶಿವಸೇನೆ, ಪ್ರಧಾನಿ ಮೋದಿಯವರ ಸಚಿವ ಸಂಪುಟದಲ್ಲಿ ಮೂರು ಸ್ಥಾನಗಳನ್ನು ಕೇಳಿದೆ, ಆದರೆ ಮುಂದಿನ ವಿಸ್ತರಣೆಯವರೆಗೆ ಕಾಯಲು ಸಿದ್ಧ ಎಂದು ಹೇಳಿದೆ.ಈ ಹಿಂದಿನ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದ ಪ್ರಫುಲ್ ಪಟೇಲ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಹುದ್ದೆಗಿಂತ ಕಡಿಮೆ ಸ್ಥಾನ ನೀಡಿರುವುದಕ್ಕೆ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಟಿಡಿಪಿ ಮತ್ತು ಜೆಡಿ(ಯು) ಎರಡೂ ಪಕ್ಷಗಳು ಲೋಕಸಭೆಯ ಸ್ಪೀಕರ್ ಹುದ್ದೆಗೆ ಪೈಪೋಟಿ ನಡೆಸುತ್ತಿವೆ. ಇದಕ್ಕೆ ಕಾರಣವಿಷ್ಟೇ, ಇದು ಅತ್ಯುತ್ತಮ ಸ್ಥಾನವಾಗಿರುವುದರಿಂದ ಪಕ್ಷದಲ್ಲಿ ಒಡಕು ಉಂಟಾದರೆ, ಪಕ್ಷಾಂತರ ನಿಷೇಧ ಕಾನೂನಿನಡಿಯಲ್ಲಿ ಯಾರು ಉಳಿಯಬೇಕು ಮತ್ತು ಯಾರನ್ನು ಅನರ್ಹಗೊಳಿಸಬೇಕು ಎಂಬುದನ್ನು ಸ್ಪೀಕರ್ ನಿರ್ಧರಿಸುತ್ತಾರೆ, ಹೀಗಾಗಿ ಸ್ಪೀಕರ್ ಹುದ್ದೆಗೆ ಮಹತ್ವ ಬಂದಿದೆ.

ಇದನ್ನೂ ಓದಿ: ಮಳೆಗಾಲದಲ್ಲಿ ಕರಾವಳಿಯಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿ: ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಈಗ ಮಿತ್ರಪಕ್ಷಗಳು, ಸಮ್ಮಿಶ್ರ ಸರ್ಕಾರದ ದುರ್ಬಲ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರಕ್ಕೆ ತಮ್ಮದು ಬೆಂಬಲ ಬೇಷರತ್ ಎಂದು ಪದೇ ಪದೇ ಹೇಳುತ್ತಿರುವುದು ಮೋದಿ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More