Home> India
Advertisement

ಮಮತಾ ಬ್ಯಾನರ್ಜೀ ಕ್ಯಾಬಿನೆಟ್ ನಿಂದ ಮತ್ತೊಂದು ವಿಕೆಟ್ ಪತನ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರದಲ್ಲಿನ ಅರಣ್ಯ ಸಚಿವ ರಾಜೀಬ್ ಬ್ಯಾನರ್ಜಿ ಸಂಪುಟದಿಂದ ಹೊರಬಂದಿರುವುದು ಮಮತಾ ಬ್ಯಾನರ್ಜಿಗೆ ಹಿನ್ನಡೆಯನ್ನುಂಟು ಮಾಡಿದೆ.

ಮಮತಾ ಬ್ಯಾನರ್ಜೀ ಕ್ಯಾಬಿನೆಟ್ ನಿಂದ ಮತ್ತೊಂದು ವಿಕೆಟ್ ಪತನ

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರದಲ್ಲಿನ ಅರಣ್ಯ ಸಚಿವ ರಾಜೀಬ್ ಬ್ಯಾನರ್ಜಿ ಸಂಪುಟದಿಂದ ಹೊರಬಂದಿರುವುದು ಮಮತಾ ಬ್ಯಾನರ್ಜಿಗೆ ಹಿನ್ನಡೆಯನ್ನುಂಟು ಮಾಡಿದೆ.

ಮಮತಾ ಬ್ಯಾನರ್ಜಿ (Mamata Banerjee) ಅವರು ಕ್ಯಾಬಿನೆಟ್ ಸಭೆಗಳನ್ನು ಬಹಳ ಸಮಯದಿಂದ ತಪ್ಪಿಸಿಕೊಳ್ಳುತ್ತಿದ್ದರು, ಪಕ್ಷದ ಕಾರ್ಯವೈಖರಿ ಬಗ್ಗೆ ಹಲವಾರು ಬಾರಿ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.ಈ ಹಿಂದೆ ಸಾರಿಗೆ ಸಚಿವ ಸುವೆಂಡು ಅಧಿಕಾರಿ ಮತ್ತು ಮಾಜಿ ಕ್ರಿಕೆಟಿಗ ಮತ್ತು ರಾಜ್ಯ ಕ್ರೀಡಾ ಸಚಿವ ಲಕ್ಷ್ಮೀರತನ್ ಶುಕ್ಲಾ ಅವರು ಸರ್ಕಾರ ಮತ್ತು ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು.

Dear Friends, Hope you all are doing well. This is to inform you that I am resigning as the Minister in Charge,...

Posted by Rajib Banerjee on Thursday, 21 January 2021

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣಕ್ಕೆ ಇಳಿಯಲಿರುವ ಶಿವಸೇನೆ..!

ಮುಖ್ಯಮಂತ್ರಿ ಮತ್ತು ರಾಜ್ಯಪಾಲ ಜಗದೀಪ್ ಧಂಖರ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ರಾಜೀಬ್ ಬ್ಯಾನರ್ಜಿ 'ಇಂದು ಅರಣ್ಯ ಸಚಿವ ಸ್ಥಾನಕ್ಕೆ ಜನವರಿ 22, 2021 ರಂದು ನನ್ನ ಕಚೇರಿಗೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಲು ವಿಷಾದಿಸುತ್ತೇನೆ.ಇದು ಪಶ್ಚಿಮ ಬಂಗಾಳದ ಜನರಿಗೆ ಸೇವೆ ಸಲ್ಲಿಸಲು ದೊಡ್ಡ ಗೌರವ ಮತ್ತು ಅವಕಾಶವಾಗಿದೆ.ಇದಕ್ಕಾಗಿ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ. ಅವರ ಅಗತ್ಯ ಕ್ರಮಕ್ಕಾಗಿ ನಾನು ಅದರ ಪ್ರತಿಯನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರಿಗೆ ಕಳುಹಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಒಪ್ಪಿಕೊಳ್ಳಿ' ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: 'TMC ಪಕ್ಷವು ಕೊರೊನಾಗಿಂತಲೂ ಅಪಾಯಕಾರಿ ವೈರಸ್'

ತಮ್ಮ ಮೇಲಿನ ವೈಯಕ್ತಿಕ ದಾಳಿಯಿಂದ ತೀವ್ರ ನೋವಾಗಿದ್ದರಿಂದಾಗಿ ತಾವು ಅರಣ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದರು.ಆದಾಗ್ಯೂ, ಮುಂದಿನ ದಿನಗಳಲ್ಲಿ ಪಕ್ಷವನ್ನು ತೊರೆಯಲು ಯೋಜಿಸುತ್ತಿದ್ದೀರಾ ಎಂದು ಕೇಳಿದಾಗ ಅದಕ್ಕೆ ಅವರು ಪ್ರತಿಕ್ರಿಯಿಸಲು ನಿರಾಕರಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

 

Read More