Home> India
Advertisement

ಕಾಲೇಜು ಹಾಗೂ ವಿವಿಗಳಲ್ಲಿ ಮೊಬೈಲ್ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರ

ಕಾಲೇಜು ಸಮಯದಲ್ಲಿ ವಿದ್ಯಾರ್ಥಿಗಳು ವಿಚಲಿತರಾಗದಂತೆ ತಡೆಯಲು ರಾಜ್ಯದಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಉತ್ತರ ಪ್ರದೇಶ ಉನ್ನತ ಶಿಕ್ಷಣ ನಿರ್ದೇಶನಾಲಯ ನಿಷೇಧಿಸಿದೆ.

ಕಾಲೇಜು ಹಾಗೂ ವಿವಿಗಳಲ್ಲಿ ಮೊಬೈಲ್ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರ

ನವದೆಹಲಿ: ಕಾಲೇಜು ಸಮಯದಲ್ಲಿ ವಿದ್ಯಾರ್ಥಿಗಳು ವಿಚಲಿತರಾಗದಂತೆ ತಡೆಯಲು ರಾಜ್ಯದಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಉತ್ತರ ಪ್ರದೇಶ ಉನ್ನತ ಶಿಕ್ಷಣ ನಿರ್ದೇಶನಾಲಯ ನಿಷೇಧಿಸಿದೆ.

ಗುರುವಾರದಂದು ಉನ್ನತ ಶಿಕ್ಷಣ ನಿರ್ದೇಶನಾಲಯವು ಬಿಡುಗಡೆ ಮಾಡಿದ ಹೊಸ ಸುತ್ತೋಲೆ ಪ್ರಕಾರ ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಆವರಣದೊಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಬೇಕೆಂದು ಉಲ್ಲೇಖಿಸಲಾಗಿದೆ.

ಈ ಸುತ್ತೋಲೆಯ ಆದೇಶದನ್ವಯ ಈಗ ರಾಜ್ಯಾದ್ಯಂತ ವಿವಿಧ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇಂದಿನಿಂದ ಕ್ಯಾಂಪಸ್‌ನೊಳಗೆ ಮೊಬೈಲ್ ಫೋನ್ ಬಳಸುವಂತಿಲ್ಲ ಎನ್ನಲಾಗಿದೆ. ಮುಖ್ಯವಾಗಿ, ಯುಪಿ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧನಾ ವಿಭಾಗಕ್ಕೂ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ.

Read More