Home> India
Advertisement

ಏಳನೇ ಹಂತದ ಮತದಾನ ಆರಂಭ, ಸಂಜೆ 5 ಗಂಟೆಗೆ ಮಹಾ ಎಕ್ಸಿಟ್ ಪೋಲ್!

ಏಳನೇ ಹಂತದಲ್ಲಿ 8 ರಾಜ್ಯಗಳು ಮತ್ತು ಒಂದು  ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಒಟ್ಟು 59 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಏಳನೇ ಹಂತದ ಮತದಾನ ಆರಂಭ, ಸಂಜೆ 5 ಗಂಟೆಗೆ ಮಹಾ ಎಕ್ಸಿಟ್ ಪೋಲ್!

ನವದೆಹಲಿ: ಲೋಕಸಭಾ ಚುನಾವಣೆಯ ಏಳನೇ ಮತ್ತು ಕಡೆಯ ಹಂತದ ಮತದಾನ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಈ ಹಂತದಲ್ಲಿ 8 ರಾಜ್ಯಗಳು ಮತ್ತು ಒಂದು  ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಒಟ್ಟು 59 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಒಟ್ಟು 918 ಅಭ್ಯರ್ಥಿಗಳು ಕಣದಲ್ಲಿದ್ದು 10.17 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಪಂಜಾಬ್ ನ 13ಕ್ಷೇತ್ರಗಳು, ಉತ್ತರ ಪ್ರದೇಶದ 13, ಪಶ್ಚಿಮ ಬಂಗಾಳದ 9, ಬಿಹಾರದ 8, ಮಧ್ಯಪ್ರದೇಶದ 8, ಹಿಮಾಚಲ ಪ್ರದೇಶ 4, ಜಾರ್ಖಂಡ್ 4, ಚಂಡೀಗಢ 1 ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದಿಂದ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್ ಪುರ ಕ್ಷೇತ್ರದಿಂದ ಕಣದಲ್ಲಿದ್ದಾರೆ. ನಟ ಸನ್ನಿ ಡಿಯೋಲ್ ಗುರುದಾಸ್‌ಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಸಂಜೆ 6 ಗಂಟೆಗೆ ಮತದಾನ ಪೂರ್ಣ ಗೊಳ್ಳಲಿದೆ. ಅಲ್ಲದೆ ಸಂಜೆ 5 ಗಂಟೆಗೆ ಝೀ ನ್ಯೂಸ್ ವಾಹಿನಿಯಲ್ಲಿ ಮಹಾ ಎಕ್ಸಿಟ್ ಪೋಲ್ ಆರಂಭವಾಗಲಿದೆ.

2014 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ 59 ಸ್ಥಾನಗಳಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. 

Read More