Home> India
Advertisement

Road Accident: ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿ, 13 ಜನ ಮೃತ, ಹಲವರಿಗೆ ಗಾಯ

Road Accident: ಮದುವೆ ದಿಬ್ಬಣಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಸುಮಾರು 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 

Road Accident: ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿ, 13 ಜನ ಮೃತ, ಹಲವರಿಗೆ ಗಾಯ

Road Accident: ರಾಜಸ್ಥಾನದ ಮೋತಿಪುರದಿಂದ ಕುಲಂಪುರಕ್ಕೆ ಹೊರಟಿದ್ದ ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢದಲ್ಲಿ (Madhya Pradesh Rajgarh) ಭಾನುವಾರ (ಜೂನ್ 2) ರಾತ್ರಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸುಮಾರು 25 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 

ರಸ್ತೆ ಅಪಘಾತಕ್ಕೆ (Road Accident) ಸಂಬಂಧಿಸಿದಂತೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, "ರಾಜ್‌ಗಢ್ ಜಿಲ್ಲೆಯ ಪಿಪ್ಲೋಡಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ರಾಜಸ್ಥಾನದ ಜಲಾವರ್ ಜಿಲ್ಲೆಯ 13 ಜನರು ಅಕಾಲಿಕ ಮರಣದ ಸುದ್ದಿ ಅತ್ಯಂತ ದುಃಖಕರವಾಗಿದೆ. ಬಾಬಾ ಮಹಾಕಲ್ ಅವರ ಪಾದದಲ್ಲಿ ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ. ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ನನ್ನ ಆಳವಾದ ಸಂತಾಪ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಬಾರೆದಿದ್ದಾರೆ. 

ಇದನ್ನೂ ಓದಿ- Remal Cyclone : ಬಂಗಾಳ ಸೇರಿದಂತೆ ಈಶಾನ್ಯ ಭಾರತದಲ್ಲಿ ರೆಮಲ್ ಚಂಡಮಾರುತ ಅನಾಹುತ, ಆತಂಕದಲ್ಲಿ ಅಮಿತ್ ಶಾ!

ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಚಿವ ನಾರಾಯಣ್ ಸಿಂಗ್ ಪನ್ವಾರ್ ಸ್ಥಳದಲ್ಲಿ ಹಾಜರಿದ್ದರು. ನಾವು ರಾಜಸ್ಥಾನ ಸರ್ಕಾರದೊಂದಿಗೆ (Rajastan Govt) ಸಂಪರ್ಕದಲ್ಲಿದ್ದೇವೆ ಮತ್ತು ರಾಜಸ್ಥಾನ ಪೊಲೀಸರು ಕೂಡ ಸ್ಥಳಕ್ಕೆ ತಲುಪಿದ್ದಾರೆ. ಗಾಯಾಳುಗಳಿಗೆ ರಾಜ್‌ಗಢದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡಿರುವ ಕೆಲವು ರೋಗಿಗಳನ್ನು ಭೋಪಾಲ್‌ಗೆ ಸ್ಥಳಾಂತರಿಸಲಾಗಿದೆ ಎಂದವರು ತಿಳಿಸಿದ್ದಾರೆ. 

ಇದನ್ನೂ ಓದಿ- ಶೇಕಡಾ 7.8 ರಷ್ಟು ಬೆಳವಣಿಗೆ ಕಂಡ ಭಾರತದ ಜಿಡಿಪಿ

ರಾಷ್ಟ್ರಪತಿ ಮುರ್ಮು ಸಂತಾಪ: 
ಈ ದುರ್ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿಷಾದ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, "ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವಾರು ಜನರ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ. ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ಟ್ವಿಟರ್‌ನಲ್ಲಿ ಬರೆದಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More