Home> India
Advertisement

West Bengal Assembly Elections 2021: Sourav Ganguly ಸಿಎಂ ಆಗಲು ಹೀಗೆ ಮಾಡಬೇಕಂತೆ!

West Bengal Assembly Elections 2021: ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರು ಪಶ್ಚಿಮ ಬಂಗಾಳ  ರಾಜ್ಯಪಾಲ ಜಗದೀಪ್ ಧಂಕರ್ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಂತರ 'ದಾದಾ' ರಾಜಕೀಯಕ್ಕೆ ಸೇರುವ ಬಗ್ಗೆ ಊಹಾಪೋಹಗಳು ಹೆಚ್ಚಾಗಿವೆ.

West Bengal Assembly Elections 2021: Sourav Ganguly ಸಿಎಂ ಆಗಲು ಹೀಗೆ ಮಾಡಬೇಕಂತೆ!

West Bengal Assembly Elections 2021: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಬಿಸಿಸಿಐ ಅಧ್ಯಕ್ಷ ಹಾಗೂ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ರಾಜಕೀಯ ಪ್ರವೇಶಿಸಲಿದ್ದು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಮಧ್ಯೆ ಇತ್ತೀಚೆಗಷ್ಟೇ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರು ಪಶ್ಚಿಮ ಬಂಗಾಳ  (West Bengal) ರಾಜ್ಯಪಾಲ ಜಗದೀಪ್ ಧಂಕರ್ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿರುವುದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ (West Bengal Assembly Elections) 'ದಾದಾ' ರಾಜಕೀಯ ಇನ್ನಿಂಗ್ಸ್ ಅನ್ನು ಪ್ರಾರಂಭಿಸುತ್ತಾರೆಯೇ?  ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಬಗ್ಗೆ ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.

ಭಾನುವಾರ ಸಂಜೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಭೇಟಿಯಾಗಿದ್ದ ಸೌರವ್ ಗಂಗೂಲಿ (Sourav Ganguly) ಅವರು ಸುಮಾರು ಒಂದು ಗಂಟೆ ಕಾಲ ರಾಜ್ಯಪಾಲರೊಂದಿಗೆ ಮಾತುಕತೆ ನಡೆಸಿದ್ದು ಗಮನಾರ್ಹವಾಗಿದೆ. ಇದರ ನಂತರ ಸೌರವ್ ಗಂಗೂಲಿ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎಂಬ ಊಹಾಪೋಹಗಳು ಪ್ರಾರಂಭವಾಗಿವೆ. ಈ ಬೆಳವಣಿಗೆಯ ಬೆನ್ನಲ್ಲೇ  ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಜೆಪಿ ಮುಖಂಡ ದಿಲೀಪ್ ಘೋಷ್ ಕೂಡ ಇಂತಹವರು ರಾಜಕೀಯ ಪ್ರವೇಶಿಸಬೇಕು ಎಂದು ಹೇಳಿರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: VIVO ಜೊತೆಗಿನ ಡೀಲ್ ಮುಕ್ತಾಯದ ಬಳಿಕ ಸಂಭವಿಸಲಿರುವ ಹಾನಿ ಎಷ್ಟು? Ganguly ನೀಡಿದ ಉತ್ತರ ಇಲ್ಲಿದೆ

ಸೌರವ್ ಗಂಗೂಲಿ ಅವರ ರಾಜಕೀಯ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮುಖ್ಯಮಂತ್ರಿಯಾಗುವ ಮೊದಲು ಸೌರವ್ ಗಂಗೂಲಿ ಪಕ್ಷಕ್ಕೆ ಸೇರಬೇಕಾಗುತ್ತದೆ. ಸೌರವ್ ಗಂಗೂಲಿ ಅವರಂತಹ ನಾಯಕರು ರಾಜಕೀಯಕ್ಕೆ ಸೇರಬೇಕು. ಅವರು ಪಕ್ಷಕ್ಕಾಗಿ ಕೆಲಸ ಮಾಡಬೇಕು. ಆಗ ಮಾತ್ರ ಅವರು ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿಯಾಗಬಹುದು ಎಂದಿದ್ದಾರೆ. 

ಇದನ್ನೂ ಓದಿ: ರಾಜಕೀಯ ಪ್ರವೇಶದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ BCCI ಅಧ್ಯಕ್ಷ Sourav Ganguly

ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಪಶ್ಚಿಮ ಬಂಗಾಳ ಸಚಿವ ಸುಬ್ರತಾ ಮುಖರ್ಜಿ ಕೂಡ ಈ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು ಯಾರು ಎಲ್ಲಿಗೆ ಹೋಗುತ್ತಾರೆ, ಯಾರೊಂದಿಗೆ ಮಾತನಾಡುತ್ತಾರೆ ಇವೆಲ್ಲದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More