Home> India
Advertisement

ಪಶ್ಚಿಮ ಬಂಗಾಳದ ಸಿಪಿಎಂ, ಕಾಂಗ್ರೆಸ್, ಟಿಎಂಸಿ ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆ: ಮುಕುಲ್ ರಾಯ್

ಸಿಪಿಎಂ, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪಶ್ಚಿಮ ಬಂಗಾಳದ 107 ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರಲಿದ್ದಾರೆ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಸಿಪಿಎಂ, ಕಾಂಗ್ರೆಸ್, ಟಿಎಂಸಿ ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆ: ಮುಕುಲ್ ರಾಯ್

ಕೋಲ್ಕತಾ: ಸಿಪಿಎಂ, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪಶ್ಚಿಮ ಬಂಗಾಳದ 107 ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಮುಕುಲ್ ರಾಯ್ ಹೇಳಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, "ಈಗಾಗಲೇ ಬಿಜೆಪಿಗೆ ಸೇರ್ಪಡೆಯಾಗಲಿರುವ ಶಾಸಕರ ಪಟ್ಟಿಯನ್ನು ನಾವು ಸಿದ್ಧಪಡಿಸಿದ್ದೇವೆ. ಅವರೆಲ್ಲರೂ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. 

ಲೋಕಸಭಾ ಚುನಾವಣೆ 2019 ರಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬಳಿಕ ಸುಮಾರು 50 ಟಿಎಂಸಿ ಕೌನ್ಸಿಲರ್‌ಗಳು ಮತ್ತು ಸಿಪಿಎಂಗೆ ಸೇರಿದ ಸೇರಿದ ಓರ್ವರು ಬಿಜೆಪಿ ಸೇರ್ಪಡೆಗೊಂಡ ಕೆಲವು ತಿಂಗಳುಗಳ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 

Read More