Home> India
Advertisement

ಯೋಗಿ 'ವ್ಯೂಹ' ಭೇದಿಸಲಿದೆಯೇ ಎಸ್ಪಿ, ಬಿಎಸ್ಪಿ ಮೈತ್ರಿಕೂಟ ?

ಅಖಿಲೇಶ್ ಯಾದವ್ ಮತ್ತು ಮಾಯಾವತಿ ಉತ್ತರಪ್ರದೇಶದ ಲಕ್ನೋದಲ್ಲಿರುವ  ಪಂಚತಾರಾ ಹೋಟೆಲ್ ವೊಂದರಲ್ಲಿನ ನಾಳೆ ಪತ್ರಿಕಾಗೋಷ್ಠಿ ನಡೆಸಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿನ ಮೈತ್ರಿ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

 ಯೋಗಿ 'ವ್ಯೂಹ' ಭೇದಿಸಲಿದೆಯೇ ಎಸ್ಪಿ, ಬಿಎಸ್ಪಿ ಮೈತ್ರಿಕೂಟ ?

ಲಕ್ನೋ: ಅಖಿಲೇಶ್ ಯಾದವ್ ಮತ್ತು ಮಾಯಾವತಿ ಉತ್ತರಪ್ರದೇಶದ ಲಕ್ನೋದಲ್ಲಿರುವ  ಪಂಚತಾರಾ ಹೋಟೆಲ್ ವೊಂದರಲ್ಲಿನ ನಾಳೆ ಪತ್ರಿಕಾಗೋಷ್ಠಿ ನಡೆಸಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿನ ಮೈತ್ರಿ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಈಗ ಈ ಮೈತ್ರಿಯಿಂದಾಗಿ ಬಿಜೆಪಿಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾರಿ ಹೊಡೆತ ಬಿಳಲಿದೆ ಎಂದು ತಿಳಿದುಬಂದಿದೆ. ಈ ಹಿಂದೆ ಕೈರಾನಾ, ಫುಲ್ಪುರ್, ಗೋರಖ್ ಪುರ್ ಉಪ ಚುನಾವಣೆಯಲ್ಲಿ ಮಹಾಮೈತ್ರಿ ಮೂಲಕ ಬಿಜೆಪಿಯನ್ನು ಸೋಲಿಸಲಾಗಿತ್ತು, ಸದ್ಯ ಯುಪಿಯಲ್ಲಿ ಪ್ರಬಲ ಬಿಜೆಪಿಯನ್ನು ಸೋಲಿಸಬೇಕಾದರೆ ಮೈತ್ರಿ ಅನಿವಾರ್ಯ ಎನ್ನುವುದನ್ನು ಅರಿತಿರುವ ಉಭಯ ಪಕ್ಷಗಳು ಈಗ ಮೈತ್ರಿ ಮಾಡಿಕೊಳ್ಳುವಲ್ಲಿ ಮುಂದಾಗಿವೆ. ಈ ಮೈತ್ರಿಯಲ್ಲಿ ಸಣ್ಣ ಪಕ್ಷಗಳಾದ ರಾಷ್ಟ್ರೀಯ ಲೋಕದಳ ಮತ್ತು ನಿಶಾದ್ ಪಕ್ಷವು ಕೂಡ ಮೈತ್ರಿಯಲ್ಲಿ ಸೇರಲಿದೆ.

ಕಳೆದ 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಅಪ್ನಾ ದಳ ಮೈತ್ರಿ ಮಾಡಿಕೊಳ್ಳುವ ಮೂಲಕ 73 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿತ್ತು, ಉಳಿದ ಏಳು ಸ್ಥಾನಗಳು ಕಾಂಗ್ರೆಸ್, ಸಮಾಜವಾದಿ ಪಕ್ಷದ ನಡುವೆ ಹಂಚಿಹೋಗಿದ್ದವು.ಈಗಾಗಲೇ ಮೂರು ಪ್ರಮುಖ ಹಿಂದಿ ರಾಜ್ಯಗಳಲ್ಲಿ ಸೋಲನ್ನು ಅನುಭವಿಸಿರುವ ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ಎಸ್ಪಿ,ಬಿಎಸ್ಪಿ ಮೈತ್ರಿ ಮಾಡಿಕೊಂಡಲ್ಲಿ ತಲೆನೋವಾಗಿ ಪರಿಣಮಿಸಲಿದೆ ಎನ್ನಲಾಗಿದೆ.ಜಾತಿ ಲೆಕ್ಕಾಚಾರವೇ  ಪ್ರಮುಖವಾಗಿರುವ ಇಂದಿನ ಚುನಾವಣೆಯಲ್ಲಿ ಈ ರಾಜಕೀಯ ಸಮೀಕರಣ ಎಷ್ಟರ ಮಟ್ಟಿಗೆ ಯಶಸ್ವಿಯಾಗಿತ್ತೋ ಎನ್ನುವುದಕ್ಕೆ ಕಾಲವೇ ಉತ್ತರಿಸಬೇಕಾಗಿದೆ.  

Read More