Home> India
Advertisement

ಡಿಸೆಂಬರ್ 7 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ 29 ರವರೆಗೆ ಪ್ರಾರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಶುಕ್ರವಾರ ಹೇಳಿದ್ದಾರೆ.

ಡಿಸೆಂಬರ್ 7 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ 29 ರವರೆಗೆ ಪ್ರಾರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಶುಕ್ರವಾರ ಹೇಳಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನ 2022 ಡಿಸೆಂಬರ್ 7 ರಿಂದ ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 29 ರವರೆಗೆ 23 ದಿನಗಳಲ್ಲಿ 17 ಅಧಿವೇಶನಗಳನ್ನು ನಡೆಸುತ್ತದೆ.ಅಮೃತ್ ಕಾಲದ ವೇಳೆಯಲ್ಲಿ ನಡೆಯುವ ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಬಗ್ಗೆ ರಚನಾತ್ಮಕ ಚರ್ಚೆಗಳನ್ನು ಎದುರು ನೋಡುತ್ತಿರುವುದಾಗಿ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Bangalore Police : ಚಿಲುಮೆ ಕಚೇರಿ ಮೇಲೆ‌ ಪೊಲೀಸರ ದಾಳಿ: ನಾಲ್ವರು ವಶಕ್ಕೆ

ಬಿಜೆಪಿ ಸಂಸದ ಧರ್ಮಪುರಿ ಅರವಿಂದ್ ಅವರ ನಿವಾಸದ ಮೇಲೆ ನಡೆದ ದಾಳಿಯನ್ನು ಜೋಶಿ ಖಂಡಿಸಿದ್ದಾರೆ.ಈ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು 'ಟಿಆರ್‌ಎಸ್‌ನ ಈ ಧೋರಣೆ ಮತ್ತು ಅದರ ಗೂಂಡಾಗಿರಿ ಮತ್ತು ಜನಪ್ರತಿನಿಧಿಗಳಿಗೆ ಮತ್ತು ಬಿಜೆಪಿಯನ್ನು ಬೆಂಬಲಿಸುವವರಿಗೆ ಬೆದರಿಕೆ ಹಾಕುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ- ಮಧುಮೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನಿಮ್ಮ ಜೀವನಶೈಲಿಯಲ್ಲಿ ಈ 5 ಬದಲಾವಣೆ ಮಾಡಿ

ಈ ಹಿಂದೆ ತೆಲಂಗಾಣ ಹೆಚ್ಚುವರಿ ರಾಜ್ಯವಾಗಿತ್ತು, ಆದರೆ ಈಗ ಸಾಲದ ಸುಳಿಯಲ್ಲಿ ಸಿಲುಕಿರುವ ರಾಜ್ಯವಾಗಿದೆ ಎಂದು ಆರೋಪಿಸಿದರು."ಕೆಸಿಆರ್, ಕೆಟಿಆರ್ ಅವರಂತಹ ಕೆಲವರು, ಅವರ ಕುಟುಂಬಗಳು ಮತ್ತು ಕೆಲವು ಸಚಿವರು ಶ್ರೀಮಂತರಾಗಿದ್ದಾರೆ ಆದರೆ ರಾಜ್ಯ ಮತ್ತು ಅದರ ಜನರು ದಿನದಿಂದ ದಿನಕ್ಕೆ ಬಡವಾಗುತ್ತಿದ್ದಾರೆ" ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More