Home> Karnataka Assembly Election
Advertisement

Karnataka Election 2023: ಮೋದಿ ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ - ಹೆಚ್‌ಡಿ ಕುಮಾರಸ್ವಾಮಿ

Karnataka Election 2023 : ಮೋದಿ ಜನರಿಗೆ ತೊಂದರೆ ಕೊಟ್ಟು ರೋಡ್ ಶೋ ಮಾಡುತ್ತಿದ್ದಾರೆ. ನಾಳೆ ನೀಟ್ ಪರೀಕ್ಷೆ ಬರೆಯುವ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. 

Karnataka Election 2023: ಮೋದಿ ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ - ಹೆಚ್‌ಡಿ ಕುಮಾರಸ್ವಾಮಿ

ಚಾಮರಾಜನಗರ : ಮೋದಿ ಜನರಿಗೆ ತೊಂದರೆ ಕೊಟ್ಟು ರೋಡ್ ಶೋ ಮಾಡುತ್ತಿದ್ದಾರೆ. ರೋಡ್ ಶೋನಿಂದ ದುಡಿಯುವ ಜನ ಬೀದಿ ಪಾಲಾಗುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ. ನಾಳೆ ನೀಟ್ ಪರೀಕ್ಷೆ ಬರೆಯುವ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಮನೆ ಬಾಗಿಲು ತೆಗೆಯಬೇಡಿ, ಓಣಿಯಲ್ಲಿ ಓಡಾಡಬೇಡಿ ಅಂತಾರೆ. ಹಾಗಿದ್ರೆ ರೋಡ್ ಶೋ ಯಾಕೆ ಮಾಡ್ತೀರಾ? ಇದರಿಂದ ಜನರಿಗೆ ತೊಂದರೆಯೆ ಹೊರತು ಬಿಜೆಪಿಗೆ ಲಾಭ ಇಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. 

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಬಿರುಸಿನ ಪ್ರಚಾರ : ಭವ್ಯ ನರಸಿಂಹಮೂರ್ತಿ ಸಾಥ್‌

ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ 

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಸಿದ್ದರಾಮಯ್ಯನವರಿಗೆ ಯಾವ ಸಿದ್ಧಾಂತವಿದೆ. ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿ ಕಾಂಗ್ರೆಸ್ ಅನ್ನೇ ಮುಗಿಸಿ ಎನ್ನುತ್ತಾರೆ. ಅವರ ಹೃದಯದಲ್ಲಿರುವುದನ್ನು ಹೇಳುತ್ತಾರೆ. ಆಮೇಲೆ ಇಲ್ಲ ಇಲ್ಲ ಬಿಜೆಪಿ ಮುಗಿಸಿ ಅಂತಾರೆ. ಇದು ಅವರ ಸಿದ್ದಾಂತ. ಸಿದ್ದಾಂತವನ್ನು‌ ಅವರಿಂದ ಕಲಿಯಬೇಕಾಗಿಲ್ಲ ಎಂದರು. 

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಹತ್ಯೆ ಕುರಿತು ಆಡಿಯೋ: ಸತ್ಯಾಸತ್ಯತೆಯ ಬಗ್ಗೆ ತನಿಖೆ - ಬೊಮ್ಮಾಯಿ

ಅಧಿಕಾರದಲ್ಲಿದ್ದಾಗ ಲಿಂಗಾಯತರ ಬಗ್ಗೆ ಮಾತನಾಡಿ ಈಗ ಲಿಂಗಾಯತರೇ ಕ್ಷಮಿಸಿ ಎಂದು ಹೇಳುತ್ತಿದ್ದಾರೆ. ಇವರು ಜಾತ್ಯಾತೀತವಾದಿನಾ? ಇವರ ಬಳಿ ಜಾತ್ಯಾತೀತವಾದ ಏನು ಎಂದು ಕಲಿಯಬೇಕಾ? ಪ್ರತಿ ಸಮಾಜಕ್ಕೆ ದೇವೇಗೌಡರು ಕೊಟ್ಟ ರಾಜಕೀಯ ಶಕ್ತಿನಾ ಇವರ ಕೈಯಲ್ಲಿ ಕೊಡಲು ಸಾಧ್ಯಾನಾ? ಐದು ವರ್ಷ ಸರ್ಕಾರ ನಡೆಸಿದ ಸಿದ್ದರಾಮಯ್ಯ ಕೊಟ್ರಾ ಎಲ್ಲರಿಗಿಂತ ಹೆಚ್ಚಿನ ಅಡ್ಜಸ್ಟ್‌ಮೆಂಟ್ ರಾಜಕಾರಣ ಸಿದ್ದರಾಮಯ್ಯ ಅವರದು. ಮೊನ್ನೆ ನಾಗಮಂಗಲದಲ್ಲಿ ಭಾಷಣ ಮಾಡಿ ಪಶ್ಚಾತ್ತಾಪ ಪಡಲಿಲ್ವಾ. ಯಾರನ್ನೋ ಗೆಲ್ಲಿಸಿ ತಪ್ಪು ಮಾಡಿದ್ವಿ ಅಂತಾ ಹೇಳಿಲ್ವಾ, ಅದಕ್ಕಿಂತ ಬೇಕಾ ಎಂದು ಹೇಳಿದರು. 

ಇದನ್ನೂ ಓದಿ: ಮೋದಿ ರೋಡ್ ‘ಶೋ’ಕಿಗಾಗಿ ಮರಗಳ ಕಡಿದಿದ್ದು ಯಾವ ಸಾಧನೆಗೆ?- ಕಾಂಗ್ರೆಸ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More