Home> Karnataka Assembly Election
Advertisement

Karnataka Election 2023: ಪ್ರಶ್ನೆಗಳ ಬಾಣಬಿಟ್ಟು ಉತ್ತರಿಸಿ ಮೋದಿ ಎಂದ ಸಿದ್ದರಾಮಯ್ಯ

Karnataka Assembly Election 2023: ಗ್ರಾಮೀಣ ಬ್ಯಾಂಕಿಂಗ್, IPBS, ಕೇಂದ್ರ ಸ್ವಾಮ್ಯದ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ನಿರಾಕರಿಸಿ ಹುಟ್ಟಿದ ನೆಲದಲ್ಲಿಯೇ ಕನ್ನಡಿಗ ಯುವಜನರಿಗೆ ಉದ್ಯೋಗ ವಂಚನೆ ಮಾಡಲಾಗಿದೆ. ಇವರು ಪ್ರತಿಭಟನೆ ನಡೆಸುವಾಗ ನ್ಯಾಯ ಕೊಡಿಸಲು ನೀವು ಯಾಕೆ ಬಂದಿರಲಿಲ್ಲ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Karnataka Election 2023: ಪ್ರಶ್ನೆಗಳ ಬಾಣಬಿಟ್ಟು ಉತ್ತರಿಸಿ ಮೋದಿ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿಯವರಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಪ್ರಶ್ನೆಗಳ ಸುರಿಮಳೆಗೈದು ಉತ್ತರಿಸಿ ಎಂದು ಕೇಳಿಕೊಂಡಿದ್ದಾರೆ. #AnswerMadiModi ಹ್ಯಾಶ್‍ಟ್ಯಾಗ್‍ ಬಳಸಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

‘ಗ್ರಾಮೀಣ ಬ್ಯಾಂಕಿಂಗ್, ಐಬಿಪಿಎಸ್, ಕೇಂದ್ರ ಸ್ವಾಮ್ಯದ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ನಿರಾಕರಿಸಿ ಹುಟ್ಟಿದ ನೆಲದಲ್ಲಿಯೇ ಕನ್ನಡಿಗ ಯುವಜನರಿಗೆ ಉದ್ಯೋಗ ವಂಚನೆ ಮಾಡಲಾಗಿದೆ. ಇವರು ಪ್ರತಿಭಟನೆ ನಡೆಸುವಾಗ ನ್ಯಾಯ ಕೊಡಿಸಲು ನೀವು ಯಾಕೆ ಬಂದಿರಲಿಲ್ಲ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: "ಬಿಜೆಪಿಗೆ ಮಲ್ಲಿಕಾರ್ಜುನ್ ಖರ್ಗೆಯವರನ್ನು ಕೊಲ್ಲುವಷ್ಟು ದ್ವೇಷ ಏಕೆ? "-ಕಾಂಗ್ರೆಸ್ ಪ್ರಶ್ನೆ

ಕಳೆದ 4 ಬಜೆಟ್‍ಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಲಾಗುವ ಅನುದಾನ ಶೇ.1.97ಕ್ಕಿಂತ ಮೇಲೆ ಏರಿಲ್ಲ.  2022ರ ಸಿಎಜಿ ವರದಿ ಪ್ರಕಾರ 2022ರಲ್ಲಿ 1.62 ಲಕ್ಷ ವಿದ್ಯಾರ್ಥಿಗಳು ಶಾಲೆಗಳನ್ನು ತ್ಯಜಿಸಿದ್ದಾರೆ. 2020-21 ಮತ್ತು 2021-22ರ ಅವಧಿಯಲ್ಲಿ 1,965 ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. ಶಿಕ್ಷಣ ವಂಚಿತ ಮಕ್ಕಳ ಭವಿಷ್ಯ ಹಾಳಾಗುವಾಗ ನ್ಯಾಯ ಕೊಡಿಸಲು ನೀವು ಯಾಕೆ ಬಂದಿರಲಿಲ್ಲ?’ ಎಂದು ಪ್ರಶ್ನಿಸಿದ್ದಾರೆ.

‘ಪಿಎಸ್‍ಐ ನೇಮಕಾತಿ ಹಗರಣದಲ್ಲಿ 1.29 ಲಕ್ಷ ಯುವಜನರ ಭವಿಷ್ಯದ ಬಲಿ, ಎಇ, ಮತ್ತು ಜೆಇ ಪರೀಕ್ಷೆಗಳಲ್ಲಿ ತಲಾ 50-80 ಲಕ್ಷ ರೂ. ಸುಲಿಗೆ. ನಿರುದ್ಯೋಗದಿಂದ ಬೇಸತ್ತು 1,129 ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ ನ್ಯಾಯ ಕೊಡಿಸಲು ನೀವು ಯಾಕೆ ಬಂದಿರಲಿಲ್ಲ? ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ 4,600 ರೂ. ಮೊತ್ತದ ವಿದ್ಯಾರ್ಥಿ ವೇತನ ರದ್ದು ಮಾಡಲಾಗಿದೆ. 1-8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ SSLC ಪೂರ್ವ ವಿದ್ಯಾರ್ಥಿವೇತನ ರದ್ದು ಮಾಡಲಾಗಿದೆ. ಸೈಕಲ್ ನೀಡುವ ಯೋಜನೆಗೆ ಅನುದಾನ ಸ್ಥಗಿತಗೊಂಡಿದೆ. ನಾಡಿನ ಮಕ್ಕಳಿಗಾದ ಅನ್ಯಾಯದ ವಿರುದ್ಧ ನೀವು ಧ್ವನಿಯೆತ್ತಲಿಲ್ಲ ಯಾಕೆ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Karnataka Election 2023: ಬಜರಂಗಬಲಿಯನ್ನು ಅವಮಾನಿಸಿದ ಕಾಂಗ್ರೆಸ್, ರಾಮನನ್ನು ಬಂಧಿಯಾಗಿಟ್ಟಿತ್ತು - ಅಮಿತ್ ಶಾ

ರಾಜ್ಯದಲ್ಲಿ 25 ಲಕ್ಷ ನಿರುದ್ಯೋಗಿಗಳಿದ್ದಾರೆ. 2.52 ಲಕ್ಷ ಸರ್ಕಾರಿ ಹುದ್ದೆಗಳು ಭರ್ತಿಯಾಗದೆ ಖಾಲಿ ಬಿದ್ದಿವೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 53,700 ಹುದ್ದೆಗಳು ಭರ್ತಿಯಾಗಿಲ್ಲ. ಸಣ್ಣ ಕೈಗಾರಿಕೆಗಳಲ್ಲಿ ಉದ್ಯೋಗ ನಷ್ಟದಿಂದ 83,190 ಕುಟುಂಬಗಳ ಬದುಕು ಬೀದಿಗೆ ಬಿದ್ದಿತ್ತು. ಇವರ ಕಷ್ಟ ಕೇಳಲು ನೀವು ಯಾಕೆ ಬಂದಿರಲಿಲ್ಲ?’ ಎಂದು ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More