Home> Karnataka Assembly Election
Advertisement

Election Campaign:ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಸಿನ ಪ್ರಚಾರ ಕೈಗೊಳ್ಳಲಿರುವ ಪ್ರಿಯಾಂಕಾ ಗಾಂಧಿ!

Priyanka Gandhi: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ.ಮೈಸೂರು-ಚಾಮರಾಜನಗರದಲ್ಲಿ ಮತಯಾಚನೆ ಮುಗಿಸಿದ್ದು, ಇದೀಗ ನಾಳೆ ಕೆಲವು ದೊಡ್ಡ ನಗರಗಳಲ್ಲಿ ಪ್ರಚಾರದಲ್ಲಿ ಭಾಗಿಯಲಿದ್ದಾರೆ. 

Election Campaign:ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಸಿನ ಪ್ರಚಾರ ಕೈಗೊಳ್ಳಲಿರುವ ಪ್ರಿಯಾಂಕಾ ಗಾಂಧಿ!

ಬೆಂಗಳೂರು: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಎಲ್ಲಾ ಪಕ್ಷಗಳು ಬಿರುಸಿನಿಂದ ಪ್ರಚಾರ ಕಾರ್ಯ ನಡೆಸುತ್ತಿವೆ.ರಾಜ್ಯದ ಪ್ರತಿ ದಿಕ್ಕಿನಾದ್ಯಂತ ಪ್ರಚಾರದ ವಾತವಾರಣದಿಂದ ತುಂಬಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ. 

ಇದನ್ನೂ ಓದಿ: Karnataka Assembly Elections: ಮೈಸೂರಿನಲ್ಲಿ ಪ್ರಧಾನಿ ನರೇಂದ್ರಮೋದಿ ರ‍್ಯಾಲಿಯಲ್ಲಿ ಭದ್ರತಾ ಲೋಪ- ವಿಡಿಯೋ ವೈರಲ್

ಮೈಸೂರು-ಚಾಮರಾಜನಗರದಲ್ಲಿ ಮತಯಾಚನೆ ಮುಗಿಸಿದ್ದು, ಇದೀಗ ನಾಳೆ ಮಂಡ್ಯ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಪ್ರಚಾರ ನಡೆಸಲಿರುವ ಪ್ರಿಯಾಂಕಾ ಗಾಂಧಿ, ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: Karnataka Assembly Election: ಬಿಜೆಪಿ ಪ್ರಜಾ ಪ್ರಣಾಳಿಕೆಯ ಮುಖ್ಯಾಂಶಗಳು

ಪ್ರಿಯಾಂಕಾ ಗಾಂಧಿ ಮಧ್ಯಾಹ್ನ ೧೨ ಗಂಟೆಗೆ ಮಂಡ್ಯದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಚಿಂತಾಮಣಿ, 5.30 ಕ್ಕೆ ಹೊಸಕೋಟೆ ಹಾಗೂ7.15ಕ್ಕೆ ಸಿ.ವಿರಾಮನ್ ನಗರದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ. 

ಈಗಾಗಲೇ ಎಲ್ಲ ಪಕ್ಷದ ಅಭ್ಯರ್ಥಿಗಳು ಮತ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ. ಎಲ್ಲಾ ತಾಲ್ಲೂಕು, ಜಿಲ್ಲೆಗಳಲ್ಲಿ ಚುನಾವಣೆಗೆ ಸಜ್ಜಾಗಿದೆ. ರಾಜ್ಯದಾದ್ಯಂತ ಈಗಾಗಲೇ ಕಾಂಗ್ರೆಸ್ ಭರ್ಜರಿ ಪ್ರಚಾರ ಆರಂಭಿಸಿದ್ದು, ಈ ಭಾರಿ ಗದ್ದುಗೆ ಏರಲು ಸಜ್ಜಾಗಿದೆ. ಇನ್ನೊಂದೆಡೆ ರಾಜ್ಯದಲ್ಲಿ ನಿರ್ಣಾಯಕ ಪಾತ್ರವಹಿಸುವ ಲಿಂಗಾಯತ ಮತಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಪಕ್ಷವು ಸಮುದಾಯವನ್ನು ಓಲೈಸುವಲ್ಲಿ ತೊಡಗಿದೆ. ಈ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ,ರಾಹುಲ್‌ ಗಾಂಧಿ, ಕಾಂಗ್ರೆಸ್‌ ನಾಯಕರು ಭರ್ಜರಿ ಪ್ರಚಾರದಲ್ಲಿ ಮುಳುಗಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More