Home> Karnataka
Advertisement

ರಾಜ್ಯದಲ್ಲಿ ಒಂದೇ ದಿನ 175 ಡೆಂಗ್ಯೂ ಸೋಂಕು ಪತ್ತೆ; ಬೆಂಗಳೂರಿನಲ್ಲಿ ಸೋಂಕಿಗೆ ಬಾಲಕ ಬಲಿ!

Dengue in Karnataka: ಬೆಂಗಳೂರಿನಲ್ಲಿ ಡೆಂಗ್ಯೂಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಮಧ್ಯೆ ಡೆಂಗ್ಯೂ ಜ್ವರದ ಆತಂಕದ ನಡುವೆ ಕೂಡಲೇ ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ ಎಂದು ಬಿಜೆಪಿ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ. ​

ರಾಜ್ಯದಲ್ಲಿ ಒಂದೇ ದಿನ 175 ಡೆಂಗ್ಯೂ ಸೋಂಕು ಪತ್ತೆ; ಬೆಂಗಳೂರಿನಲ್ಲಿ ಸೋಂಕಿಗೆ ಬಾಲಕ ಬಲಿ!

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಜನರಿಗೆ ಡೆಂಗ್ಯೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 115 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಡೆಂಗ್ಯೂ ಸೋಂಕಿತ 352 ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

127 ಸೋಂಕಿತರು ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೆ 7 ಸಾವಿರಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ ಸೋಂಕು ತಗುಲಿದೆ. ಇನ್ನು 24 ಗಂಟೆಯಲ್ಲಿ ರಾಜ್ಯದಲ್ಲಿ 175 ಜನರಲ್ಲಿ ಡೆಂಗ್ಯೂ ಕೇಸ್ ವರದಿಯಾಗಿದೆ. 

ಇದನ್ನೂ ಓದಿ: ರೇಣುಕಾಸ್ವಾಮಿ ಮನೆಗೆ ಮಾಜಿ ಸಚಿವ ಬಿ.ಸಿ ಪಾಟೀಲ್ ಭೇಟಿ

ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ 1,908 ಹೊಸ ಪ್ರಕರಣಗಳು ಧೃಡಪಟ್ಟಿವೆ. ಇನ್ನು ಡೆಂಗ್ಯೂನಿಂದ ಅಂಜನಾಪುರದ 11 ವರ್ಷದ ಬಾಲಕ ಗಗನ್ ಸಾವನ್ನಪ್ಪಿದ್ದಾನೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಗಗನ್ ಚಿಕಿತ್ಸೆ ಫಲಿಸದೇ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. 

ಕೂಡಲೇ ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ!

ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಸನದಲ್ಲಿ ಮಕ್ಕಳ ಸಾವಿನ ನಂತರ ಬೆಂಗಳೂರಿನಲ್ಲಿ ಡೆಂಗ್ಯೂಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಮಧ್ಯೆ ಡೆಂಗ್ಯೂ ಜ್ವರದ ಆತಂಕದ ನಡುವೆ ಕೂಡಲೇ ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ ಎಂದು ಬಿಜೆಪಿ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ. 

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಹೈದರಾಬಾದ್ CFSLಗೆ ಮೊಬೈಲ್ ರವಾನೆ

ಡೆಂಗ್ಯೂ ಜ್ವರಕ್ಕೆ ನಿಖರ ಚಿಕಿತ್ಸೆ ಇಲ್ಲ. ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ. ಕೋವಿಡ್‌ ಪ್ಯಾಂಡಮಿಕ್‌ ಕಾಯಿಲೆ ತರ ಇದು ಎಂಡಮೆಕ್‌ ಕಾಯಿಲೆ. ಕೋವಿಡ್‌ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು ಅಂತಾ ಅವರು ಹೇಳಿದ್ದಾರೆ. ಡೆಂಗ್ಯೂ ಜ್ವರದ ನಿಯಂತ್ರಣ ಅಂದ್ರೆ ಸೊಳ್ಳೆಯ ನಿಯಂತ್ರಣ. ಸೊಳ್ಳೆ ನಿಯಂತ್ರಣವಾದರೆ ಮಾತ್ರ ಡೆಂಗ್ಯೂ ನಿಯಂತ್ರಣ ಆಗಲಿದೆ. ಮಳೆಗಾಲದ ಪ್ರಾರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಇದು. ಡೆಂಗ್ಯೂ ತಡೆಗಟ್ಟದಿದ್ದರೆ ಚಿಕನ್ ಗುನ್ಯಾ, ಝಿಕಾ ವೈರಸ್ ಬರಬಹುದು ಅಂತಾ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More