Home> Karnataka
Advertisement

ಶಾರ್ಟ್ ಸರ್ಕ್ಯೂಟ್‌ನಿಂದ ಎಸಿ ಸ್ಫೋಟ- ತಾಯಿ ಮತ್ತಿಬ್ಬರು ಮಕ್ಕಳು ಸಜೀವ ದಹನ

ಶಾರ್ಟ್ ಸರ್ಕ್ಯೂಟ್‌ನಿಂದ ಎಸಿ ಸ್ಫೋಟಗೊಂಡಿದ್ದು ಘಟನೆಯಲ್ಲಿ ಮಂಡ್ಯ ಮೂಲದ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಸಾವನ್ನಪ್ಪಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಎಸಿ ಸ್ಫೋಟ- ತಾಯಿ ಮತ್ತಿಬ್ಬರು ಮಕ್ಕಳು ಸಜೀವ ದಹನ

ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟವಾಗಿ ತಾಯಿ ಮತ್ತು ಇಬ್ಬರು ಮಕ್ಕಳು ಸಜೀವ ದಹನವಾಗಿರುವ ದುರ್ಘಟನೆ ರಾಯಚೂರು ತಾಲ್ಲೂಕಿನ ಶಕ್ತಿನಗರದಲ್ಲಿ ನಡೆದಿದೆ.

ಘಟನೆಯಲ್ಲಿ ಮಂಡ್ಯ ಮೂಲದ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಸಾವನ್ನಪ್ಪಿದ್ದಾರೆ. ಸಿದ್ದಲಿಂಗಯ್ಯ ಅನ್ನೋರ ಪತ್ನಿ ಮತ್ತು ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ- Madal Bribe Case : ʼಮಾಡಾಳ್‌ʼ ಮಾಯ, ಕೋಟಿ ಕೋಟಿ ಹಣಕ್ಕಿಲ್ಲ ಸ್ಪಷ್ಟನೆ..! ಕೋರ್ಟ್‌ ಜಾಮೀನು ಕೊಡುತ್ತಾ..?

ಸಿದ್ದಲಿಂಗಯ್ಯ ಸ್ವಾಮಿ RTPSನಲ್ಲಿ ಎಇಇ ಆಗಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಕ್ತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮೃತರ ಸಂಬಂಧಿಕರ ಹೇಳಿಕೆ ಆಧರಿಸಿ ದೂರು ದಾಖಲಿಸಲಿಕೊಂಡಿದ್ದಾರೆ. 

ಇದನ್ನೂ ಓದಿ- Sumalatha Ambarish: ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಕನ್ಫರ್ಮ್ ಆಯ್ತಾ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More