Home> Karnataka
Advertisement

ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಡಿಸೆಂಬರ್ 08 ರವರೆಗೆ ವಿಸ್ತರಿಸಲಾಗಿದೆ.

ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಡಿಸೆಂಬರ್ 08 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: Prashant Kishor : ಕಾಂಗ್ರೆಸ್‌ ನಾಯಕತ್ವದ ವಿರುದ್ಧ ದೀದಿ ನಂತರ ಪ್ರಶಾಂತ್ ಕಿಶೋರ್ ವಾಗ್ದಾಳಿ

ವಾರ್ತಾ ಇಲಾಖೆಯ ಕೊಪ್ಪಳ ಜಿಲ್ಲಾ ಕಚೇರಿಯಲ್ಲಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಅಭ್ಯರ್ಥಿಗೆ ಮಾಹೆಯಾನ ರೂ. 15,000 ಸ್ಟೆಫಂಡ್ ನೀಡಲಾಗುವುದು. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.  ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.  

ಇದನ್ನೂ ಓದಿ: ಟೀಂ ಇಂಡಿಯಾ ದ. ಆಫ್ರಿಕಾ ಪ್ರವಾಸಕ್ಕೆ ಒಮಿಕ್ರಾನ್ ಭೀತಿ, ಕಟ್ಟುನಿಟ್ಟಿನ ಕ್ರಮಕ್ಕೆ‌ಮುಂದಾದ BCCI

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯವರಾಗಿರಬೇಕು. ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ತಮ್ಮ ಸ್ವವಿವರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ , ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 08 ಕೊನೆಯ ದಿನವಾಗಿದೆ.

ಇದನ್ನೂ ಓದಿ: ಟೀಂ ಇಂಡಿಯಾ ದ. ಆಫ್ರಿಕಾ ಪ್ರವಾಸಕ್ಕೆ ಒಮಿಕ್ರಾನ್ ಭೀತಿ, ಕಟ್ಟುನಿಟ್ಟಿನ ಕ್ರಮಕ್ಕೆ‌ಮುಂದಾದ BCCI 

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ದೂರವಾಣಿ ಸಂಖ್ಯೆ: 08539-220607, ಮೊ.ಸಂ. 9480841245, 9844157780 ಗೆ ಸಂಪರ್ಕಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಸುರೇಶ್ ಪ್ರಕಟಣೆ ತಿಳಿಸಿದ್ದಾರೆ.

Read More