Home> Karnataka
Advertisement

ಕಳ್ಳಭಟ್ಟಿಗೆ ಕಡಿವಾಣ ಹಾಕಿ ಬಡವರ ಆರೋಗ್ಯ-ಆದಾಯ ಕಾಪಾಡಿ: ಸಿಎಂ ಸಿದ್ದರಾಮಯ್ಯ

ರಾಜ್ಯದ ಗಡಿ ಭಾಗಗಳಲ್ಲಿ, ವಿಶೇಷವಾಗಿ ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಣಿಕೆ ಕುರಿತು ಜಾರಿ ದಳದವರು ಹೆಚ್ಚಿನ ನಿಗಾ ವಹಿಸಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ 

ಕಳ್ಳಭಟ್ಟಿಗೆ ಕಡಿವಾಣ ಹಾಕಿ  ಬಡವರ ಆರೋಗ್ಯ-ಆದಾಯ ಕಾಪಾಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳ್ಳಭಟ್ಟಿಗೆ ಕಡಿವಾಣ ಹಾಕಿ, ಅಕ್ರಮ ಮದ್ಯ ನುಸುಳುವಿಕೆ ತಪ್ಪಿಸಿ, ಬಾಕಿ ತೆರಿಗೆ ವಸೂಲಿ ಮಾಡಿ ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿ ಸಾಧಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲಾಖೆಯ ಪ್ರಸಕ್ತ ವರ್ಷದ ರಾಜಸ್ವ ಸಂಗ್ರಹ ಗುರಿ 36,000 ಕೋಟಿ ಇದ್ದು, ತೆರಿಗೆ ಸಂಗ್ರಹದ ಬೆಳವಣಿಗೆ ದರ 5.31% ರಷ್ಟಿದೆ. ನಿಗದಿತ ಗುರಿ ಸಾಧನೆಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. 

ಇದನ್ನೂ ಓದಿ- ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡಿ ತಮಿಳುನಾಡಿಗೆ ನೀರು ಹಾರಿಸಲು ಸಾಧ್ಯವಿಲ್ಲ: ಕೇಂದ್ರ ಸಚಿವರಿಗೆ ಸಿಎಂ ಪತ್ರ

ರಾಜ್ಯದ ಗಡಿ ಭಾಗಗಳಲ್ಲಿ, ವಿಶೇಷವಾಗಿ ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಣಿಕೆ ಕುರಿತು ಜಾರಿ ದಳದವರು ಹೆಚ್ಚಿನ ನಿಗಾ ವಹಿಸಬೇಕು. ಕಳ್ಳಭಟ್ಟಿ ಮದ್ಯ ತಯಾರಿಕೆ, ಮಾರಾಟದಿಂದ ಬಡವರ ಆದಾಯ ಮತ್ತು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದರಿಂದ ಕಳ್ಳಭಟ್ಟಿ ಮದ್ಯ ತಯಾರಿಕೆ ಮತ್ತು ಮಾರಾಟವನ್ನು ಮಟ್ಟಹಾಕುವಂತೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಸೂಚಿಸಿದರು.

ಎಲ್ಲ ಕಡೆ ಜಾಗೃತದಳ ಕಟ್ಟೆಚ್ಚರ ವಹಿಸಬೇಕು. ಎಲ್ಲ ಉಪ ಆಯುಕ್ತರು ರಾಜಸ್ವ ಸಂಗ್ರಹ ಹೆಚ್ಚಳಕ್ಕೆ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು. ಹಳೆ ಬಾಕಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು.  ಅಬಕಾರಿ ಇಲಾಖೆಯಲ್ಲಿ ಸುಧಾರಣಾ ಕ್ರಮಗಳ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು.

ಇದನ್ನೂ ಓದಿ- 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಸಿಎಂಗೆ ಪ್ರಸ್ತಾವನೆ

ಗಡಿ ಭಾಗಗಳ ಚೆಕ್‌ಪೋಸ್ಟಿನಲ್ಲಿ ಹೋಂ ಗಾರ್ಡ್‌ಗಳ ಸೇವೆ ಪಡೆದುಕೊಂಡು, ಇನ್ನಷ್ಟು ಬಲ ಪಡಿಸಲು ಹಾಗೂ ಇತರ ಸೌಲಭ್ಯಕ್ಕಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್‌ ಹಾಗೂ ಡಾ. ಎಂ.ಟಿ. ರೇಜು, ಅಬಕಾರಿ ಆಯುಕ್ತ ರವಿಶಂಕರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Read More