Home> Karnataka
Advertisement

ಗಣೇಶೋತ್ಸವ ಆಚರಣೆ ಹಿನ್ನೆಲೆ ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಪೊಲೀಸರಿಂದ ಬಿಗಿ ಭದ್ರತೆ!!

ವಾಣಿಜ್ಯನಗರಿ ಹುಬ್ಬಳ್ಳಿಯ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ ಬೆನ್ನಲ್ಲೇ ಸೋಮವಾರ ಭಾರೀ ಪೊಲೀಸ್ ಭದ್ರತೆ ನಡುವೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. 
 

ಗಣೇಶೋತ್ಸವ ಆಚರಣೆ ಹಿನ್ನೆಲೆ ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಪೊಲೀಸರಿಂದ ಬಿಗಿ ಭದ್ರತೆ!!

Hubli-Dharwad: ಇನ್ನೊಂದು ಕಡೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಾಕ  ಪೊಲೀಸ್  ಭದ್ರತೆ ನಿಯೋಜನೆ ಮಾಡಿದ್ದು ಇಂದು ನಗರದ ಪ್ರಮುಖ ಬೀದಿಗಳಲ್ಲಿ ಸುಮಾರು 5000 ಸಾವಿರಾರು ಪೊಲೀಸರು ಪಥಸಂಚನ ನಡೆಸಲಾಯಿತು.

ನಾಲ್ಕು ಸಂಘಟನೆಗಳಲ್ಲಿ ಒಂದಕ್ಕೆ ಮೂರು ದಿನ ಗಣೇಶೋತ್ಸವ ಆಚರಣೆ ಮಾಡಲು ಮಾತ್ರ ಅನುಮತಿ ನೀಡಲಾಗಿದ್ದು, ಉಳಿದ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಗಣೇಶ ಚತುರ್ಥಿ ಆಚರಣೆ ಮಾಡಲಾಗುತ್ತಿದೆ. 

ಇನ್ನೊಂದೆಡೆ ಈ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಾಕಷ್ಟು ಬೆಳವಣಿಗೆ ಸಹ ನಡೆಯುತಿದ್ದು, ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸಮಿತಿ ಕಾನೂನು ಹೋರಾಟಕ್ಕೆ ಸಹ ಪ್ಲಾನ್ ಮಾಡಿ ಹಿನ್ನಲೆಯಲ್ಲಿ ಈ ಸಲ ಅತ್ಯಂತ ಸೂಕ್ಷ್ಮವಾದ ವಾತಾವರಣ ಇದೆ.. 

ಇದನ್ನೂ ಓದಿ-ಈ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ನೀರು ಕೊಡಬಾರದು

ಈ ಎಲ್ಲ ಬೆಳವಣಿಗೆಗಳ ನಡುವೆ ಮೈದಾನಕ್ಕೆ ಭಾರೀ ಬಿಗಿ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಕಡೆ 1500 ಕ್ಕೋ  ಹೆಚ್ಚು ಪೊಲೀಸ್ ಸಿಬ್ಬಂದಿ ಸೇರಿದಂತೆ ಕೆಎಸ್ಆರ್‌ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. 

ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ವತಃ‌ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಉಸ್ತುವಾರಿ ವಹಿಸಿದ್ದು ಇದೇ ವೇಳೆ ಸುಮಾರು 5000 ಪೊಲೀಸ್ ಸಿಬ್ಬಂದಿ, ಹಿರಿಯ ಪೊಲೀಸ್ ಅಧಿಕಾರಿಗಳು, ಆರ್ ಐಎಫ್, ಸಿಎಎಫ್  ಕೆಎಸ್ ಆರ್ ಪಿ ತುಕುಡಿ, ಸಿಆರ್ ತಂಡಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದರು.

ಇದನ್ನೂ ಓದಿ-ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ದಳಪತಿಗಳ ಒಕ್ಕೊರಲ ಅಭಿಮತ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

Read More