Home> Karnataka
Advertisement

ಬಿಬಿಎಂಪಿ ಮತದಾರರ ಪಟ್ಟಿ ಪರಿಷ್ಕರಣೆ: ನೇರವಾಗಿ ಫೀಲ್ಡ್ ಗೆ ಇಳಿದ ಬಿಬಿಎಂಪಿ ಆಯುಕ್ತ

ಭಾರತ ಚುಣಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಶುದ್ಧೀಕರಣವನ್ನು ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಇಂದು ಮನೆ-ಮನೆಗೆ ಭೇಟಿ ನಿಡುವ ಮೂಲಕ  ಮತದಾರರ ಪಟ್ಟಿ ಪರಿಶೀಲನೆಯನ್ನ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿ ಚುನಾವಣೆ ಅಧಿಕಾರಿಗಳು ಮಾಡಿದ್ದಾರೆ. 

 ಬಿಬಿಎಂಪಿ ಮತದಾರರ ಪಟ್ಟಿ ಪರಿಷ್ಕರಣೆ: ನೇರವಾಗಿ ಫೀಲ್ಡ್ ಗೆ ಇಳಿದ ಬಿಬಿಎಂಪಿ ಆಯುಕ್ತ

ಬೆಂಗಳೂರು: ಭಾರತ ಚುಣಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಶುದ್ಧೀಕರಣವನ್ನು ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಇಂದು ಮನೆ-ಮನೆಗೆ ಭೇಟಿ ನಿಡುವ ಮೂಲಕ  ಮತದಾರರ ಪಟ್ಟಿ ಪರಿಶೀಲನೆಯನ್ನ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿ ಚುನಾವಣೆ ಅಧಿಕಾರಿಗಳು ಮಾಡಿದ್ದಾರೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಕಾರ್ಯಗಳನ್ನು ನಡೆಸಲಾಗಿದ್ದು, ದಿನಾಂಕ: 09.11.2022 ರಂದು ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಪ್ರಕಟಿಸಲಾಯಿತು. ಸದರಿ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ, ತಪ್ಪಾಗಿದ್ದಲ್ಲಿ, ತಪ್ಪಾಗಿ ಸೇರ್ಪಡೆಗೊಂಡಿದ್ದಲ್ಲಿ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ನಮೂನೆ-6, 7 ಮತ್ತು 8 ರಲ್ಲಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಭಾರತ ಚುನಾವಣಾ ಆಯೋಗವು ದಿನಾಂಕ: 09.11.2022 ರಿಂದ 08.12.2022 ರವರಗೆ ಅವಕಾಶವನ್ನು ಕಲ್ಪಿಸಿತ್ತು. ಈ ವೇಳೆ ಎಲ್ಲಾ ಬಿ.ಎಲ್.ಓ ಮತ್ತು ಬಿ.ಎಲ್.ಓ ಮೇಲ್ವಿಚಾರಕರುಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಶುದ್ಧೀಕರಿಸುವ ಕಾರ್ಯ ಮಾಡಿರುತ್ತಾರೆ. 

ಇದನ್ನೂ ಓದಿ: ನೂತನ ತಂತ್ರಜ್ಞಾನದ ಮೂಲಕ ರಸ್ತೆ ಡಾಂಬರೀಕರಣ: ದೇಶದಲ್ಲೇ ಇದೇ ಮೊದಲು

ಅನಂತರ, ಭಾರತ ಚುನಾವಣಾ ಆರೋಗದ ನಿದೇರ್ಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವುದನ್ನು ಜಿಲ್ಲಾ ಚುನಾವಣಾ ಅಧಿಕಾರಿ, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳು ಕೆಲ ಮನೆಗಳಿಗಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವ ಬಗ್ಗೆ ಸೂಪರ್ ಚೆಕ್ಕಿಂಗ್ ಮಾಡಲಾಗುತ್ತದೆ. ಅದರಂತೆ ಇಂದು ಮುಖ್ಯ ಆಯುಕ್ತರು ಗೋವಿಂದರಾಜ ನಗರದ ಗಂಗಮ್ಮ ತಿಮ್ಮಯ್ಯ ಕಲ್ಯಾಣ ಮಂಟಪದ ಸುತ್ತಮುತ್ತಲಿನ ಮನೆಗಳು ಹಾಗೂ ವಿಜಯನಗರ ವ್ಯಾಪ್ತಿಯಲ್ಲಿ ಕೆಲ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸದಂತೆ ಬಿ.ಎಲ್.ಓ ಮತ್ತು ಬಿ.ಎಲ್.ಓ ಮೇಲ್ವಿಚಾರಕರುಗಳು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವುದು ಸರಿಯಿದೆಯೇ ಎಂಬುದನ್ನು ತಿಳಿಯುವ ಸಲುವಾಗಿ ಭಾರತ ಚುನಾವಣಾ ಆಯೋಗವು ಜಿಲ್ಲಾ ಚುನಾವಣಾ ಅಧಿಕಾರಿ, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳ ಮುಖಾಂತರ ಮೇಲ್ವಿಚಾರಣೆ ಮಾಡಲು ನಿರ್ದೇಶಿಸಿರುವಂತೆ ಇಂದು ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು.

12 ನಮೂನೆಗಳ ಪರಿಶೀಲನೆ:

ನಗರದ ಗೋವಿಂದರಾಜನಗರ ಹಾಗೂ ವಿಜಯನಗರ ವ್ಯಾಪ್ತಿಯಲ್ಲಿ ಮನೆ-ಮನೆಗೆ ಭೇಟಿ 12 ನಮೂನೆಗಳನ್ನು ಸೂಪರ್ ಚೆಕ್ಕಿಂಗ್ ಮಾಡಲಾಯಿತು.ಪರಿಶೀಲನೆಯ ವೇಳೆ ಎಲ್ಲವೂ ಸರಿಯಿದ್ದು, ನಮೂನೆಗಳಿಗೆ ಮನೆಯವರ ಹೆಸರು, ವಿಳಾಸ, ಸಹಿ ಪರಿಶೀಲನೆಯ ಜೊತೆಗೆ ಎರಡು ಕಡೆ ಹೆಸರಿದ್ದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಯ ಜೊತೆ ಮಾತನಾಡಿ ಒಂದು ಕಡೆ ಹೆಸರನ್ನು ತೆಗೆಸಲಾಗುವುದು. ಮತದಾರರ ಪಟ್ಟಿ ಪರಿಶೀಲನೆಯ ವೇಳೆ ಅಧಿಕಾರಿಗಳು ಸಮಯ ಹಾಗೂ ದಿನಾಂಕವನ್ನು ಸರಿಯಾಗಿ ನಮೂದಿಸದಿರುವುದು ಕೆಲ ನಮೂನೆಗಳಲ್ಲಿ ಕಂಡುಬಂದಿದ್ದು, ಅದನ್ನು ಪರಿಶೀಲನೆಯ ವೇಳೆ ಸರಿಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಿಳುವಳಿಕೆ ನೀಡಲಾಗಿದೆ.

ಇದನ್ನೂ ಓದಿ: ಮಲೆ ಮಹದೇಶ್ವರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

ಈ ವೇಳೆ ಅಪರ ಜಿಲ್ಲ ಚುನಾವಣಾ ಅಧಿಕಾರಿ(ದಕ್ಷಿಣ) ಹಾಗೂ ದಕ್ಷಿಣ ವಲಯ ಜಂಟಿ ಆಯುಕ್ತರಾದ ಜಗದೀಶ್ ನಾಯ್ಕ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಉಮೇಶ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More