Home> Karnataka
Advertisement

‘ಸಂತೋಷ್ ಪಾಟೀಲ್ ಕುಟುಂಬಕ್ಕೆ ಸರ್ಕಾರ 1 ಕೋಟಿ ಪರಿಹಾರ ನೀಡಬೇಕು’

ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲು CM ಬೊಮ್ಮಾಯಿ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

‘ಸಂತೋಷ್ ಪಾಟೀಲ್ ಕುಟುಂಬಕ್ಕೆ ಸರ್ಕಾರ 1 ಕೋಟಿ ಪರಿಹಾರ ನೀಡಬೇಕು’

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವುದಾಗಿ ಹೇಳಿದ್ದು, ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಸಂದ ಜಯವೆಂದು ಕಾಂಗ್ರಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.

ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ’ ಎಂದು ಆಗ್ರಹಿಸಿದ್ದಾರೆ. ‘ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಸಂದ ಜಯ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ ಒಂದು ವಿಕೆಟ್ ಅಷ್ಟೇ ಅಲ್ಲ- ತನಿಖೆ ಮಾಡಿದ್ರೆ ಅರ್ಧ ಕ್ಯಾಬಿನೆಟ್ ಖಾಲಿಯಾಗುತ್ತೆ- ಪ್ರಿಯಾಂಕ್ ಖರ್ಗೆ

‘ಕೆ.ಎಸ್.ಈಶ್ವರಪ್ಪ ಅವರಿಂದ ಕೇವಲ ರಾಜೀನಾಮೆ ಪಡೆದರೆ ಸಾಲದು. ಅವರ ಮೇಲೆ ಭ್ರಷ್ಟಾಚಾರ & ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಿ, ಜೈಲಿಗೆ ಕಳುಹಿಸಬೇಕು’ ಎಂದು ಜಮೀರ್ ಅಹ್ಮದ್ ಆಗ್ರಹಿಸಿದ್ದಾರೆ.

‘ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದೇಶಿಸಬೇಕು ಮತ್ತು ಮೃತ ಸಂತೋಷ್ ಪಾಟೀಲ್ ಕುಟುಂಬಕ್ಕೆ ರಾಜ್ಯ ಸರ್ಕಾರ 1 ಕೋಟಿ ರೂ. ಪರಿಹಾರ ನೀಡಬೇಕೆಂದು’ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆ ನಮ್ಮ ಬೇಡಿಕೆ ಅಲ್ಲ, ಬಂಧನ ಆಗಬೇಕು: ಡಿಕೆಶಿ

‘ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರಾದ ಮೃತ ಸಂತೋಷ್ ಪಾಟೀಲ್ ಮಾಡಿರುವ ಶೇಕಡ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More