Home> Karnataka
Advertisement

ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್

ಬಿಜೆಪಿ ಪ್ರತಿಯೊಂದು ವಿಚಾರದಲ್ಲಿಯೂ ಯಾವಾಗಲೂ ಆರೋಪ ಮಾಡುತ್ತಲೇ  ಇರುತ್ತದೆ. ಸದಾ ಆರೋಪ ಮಾಡುವುದೇ ಬಿಜೆಪಿಯ ಕೆಲಸ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. 
 

ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್

ಕಲಬುರ್ಗಿ : ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ. ನಾಗಮಂಗಲ, ಮಂಗಳೂರು ಸೇರಿದಂತೆ ಒಂದಷ್ಟು ಕಡೆ ಗಣಪತಿ ವಿಸರ್ಜನೆ ಗಲಾಟೆಗಳಲ್ಲಿ ಪಿಎಫ್ ಐ,ಬಾಂಗ್ಲಾ ವಲಸಿಗರ ಕೈವಾಡವಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಡಿಕೆಶಿ ಮಾತನಾಡಿದ್ದಾರೆ. "ಗಣಪತಿ ವಿಸರ್ಜನೆ ವೇಳೆ ಉಂಟಾಗಿರುವ ಗಲಭೆಗಳ ವಿರುದ್ಧ ನಮ್ಮ ಸರ್ಕಾರ ಕೂಡಲೇ ಕ್ರಮ ತೆಗೆದುಕೊಂಡಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸ ಸರ್ಕಾರ ಮಾಡುತ್ತದೆ. ಪೊಲೀಸ್ ಇಲಾಖೆ ಯಾವ ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತದೆ. ಈ ವಿಚಾರದಲ್ಲಿ ರಾಜಕಾರಣ ಮಾತನಾಡುವವರು ಮಾತನಾಡಲಿ ಎಂದು ಹೇಳಿದ್ದಾರೆ.  

ಪರಪ್ಪನ ಅಗ್ರಹಾರದ ಮೇಲೆ ಪೊಲೀಸ್ ದಾಳಿ, ಗುತ್ತಿಗೆದಾರ ಚೆಲುವರಾಜು ಅವರಿಂದ ಶಾಸಕ ಮುನಿರತ್ನ ಅವರ ಮತ್ತೊಂದು ಆಡಿಯೋ ಬಿಡುಗಡೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ನಾನು ಅಮೆರಿಕದಲ್ಲಿದ್ದ ಕಾರಣಕ್ಕೆ ಯಾವ ವಿಚಾರಗಳ ಬಗ್ಗೆಯೂ ಮಾಹಿತಿ ಇಲ್ಲ.ಎಲ್ಲದರ ಬಗ್ಗೆ ತಿಳಿದುಕೊಂಡು ನಂತರ ಪ್ರತಿಕ್ರಿಯಿಸುವುದಾಗಿ ಹೇಳಿದ್ದಾರೆ. 

ಇದನ್ನೂ ಓದಿ : ಅವರೆಯಲ್ಲಿ ಸೊಗಡಿಲ್ಲ- ತರಕಾರಿಗಳಲ್ಲಿ‌ ರುಚಿಯಿಲ್ಲ: ಕುಲಾಂತರಿ ತಳಿ ವಿರೋಧಿಸಿ ರೈತರು, ಚಿಂತಕರಿಂದ ಪ್ರತಿಭಟನೆ

ಅಮೆರಿಕದ ಚುನಾವಣಾ ಪದ್ಧತಿ, ಅಲ್ಲಿನ ಯುವಕರ ಉತ್ಸಾಹ, ಆಸಕ್ತಿ ಸೇರಿದಂತೆ ಅನೇಕ ವಿಚಾರಗಳನ್ನು ನಾವು ಕಲಿಯಬೇಕಿದೆ.ಅಮೆರಿಕಗೆ ಕುಟುಂಬ ಸಮೇತ ಖಾಸಗಿ ಪ್ರವಾಸಕ್ಕೆ ಹೋಗಿದ್ದೆ ಎಂದು ಹೇಳಿದ್ದಾರೆ. 

"ಅಮೆರಿಕ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಕಮಲ ಹ್ಯಾರಿಸ್ ಸೇರಿದಂತೆ ನಾನು ಯಾರನ್ನೂ ಭೇಟಿಯಾಗಿಲ್ಲ.ಇದೆಲ್ಲವೂ ಸುಳ್ಳು ಸುದ್ದಿ.ನಾನು ಹೋದ ಸಮಯದಲ್ಲೇ ಚುನಾವಣಾ ರ್ಯಾಲಿ ನಡೆಯುತ್ತಿತ್ತು.ಅದು ಹೇಗೆ ನಡೆಯುತ್ತದೆ ಎಂದು ವೀಕ್ಷಿಸಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : 'ಮುಂದಿನ ವರ್ಷದ ಅಂತ್ಯದೊಳಗೆ ಅನುಭವ ಮಂಟಪ ಲೋಕಾರ್ಪಣೆ'

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More