Home> Karnataka
Advertisement

ಮೋದಿ ಎದುರು ಪ್ರವಾಹಕ್ಕೆ ಪರಿಹಾರ ಕೊಡಿ ಅಂತಾ ಕೇಳುವ ಧೈರ್ಯ ಬಿಜೆಪಿಯವರಿಗಿಲ್ಲ, ನಾನೇ ಕೇಳುತ್ತೇನೆ: ಸಿದ್ದರಾಮಯ್ಯ

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವರೆಗಿನ ಅನುಭವದ ಪ್ರಕಾರ ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು @PMOIndia ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ @CMofKarnataka ಇಲ್ಲವೇ ಸಚಿವರಿಗಿಲ್ಲ ಎಂದಿದ್ದಾರೆ.

ಮೋದಿ ಎದುರು ಪ್ರವಾಹಕ್ಕೆ ಪರಿಹಾರ ಕೊಡಿ ಅಂತಾ ಕೇಳುವ ಧೈರ್ಯ ಬಿಜೆಪಿಯವರಿಗಿಲ್ಲ, ನಾನೇ ಕೇಳುತ್ತೇನೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಪರಿಹಾರ ಕೊಡಿ ಅಂತಾ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಎದುರು ಗಟ್ಟಿ ದನಿಯಲ್ಲಿ ಮಾತನಾಡುವಷ್ಟು ಧೈರ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yadiyurappa) ಅವರಿಗೆ ಇಲ್ಲ. ಅದಕ್ಕಾಗಿ ದೆಹಲಿಗೆ ಸರ್ವ ಪಕ್ಷಗಳ ನಿಯೋಗ ಕೊಂಡೊಯ್ಯಲಿ, ನಾನೇ ಕೇಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಗುಡುಗಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವರೆಗಿನ ಅನುಭವದ ಪ್ರಕಾರ ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು @PMOIndia ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ @CMofKarnataka ಇಲ್ಲವೇ ಸಚಿವರಿಗಿಲ್ಲ. ಇದಕ್ಕಾಗಿ, ಹೆಚ್ಚಿನ ಪರಿಹಾರ‌ಕೋರಲು ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ‌ ಕೊಂಡೊಯ್ಯಬೇಕು' ಎಂದು ಒತ್ತಾಯಿಸಿದ್ದಾರೆ.

@PMOIndia ಅವರ ಜೊತೆಗಿನ ರಾಜ್ಯದ ಸಚಿವರವ ಸಭೆ ಕಾಟಾಚಾರದ ಕಸರತ್ತು ಆಗಬಾರದು.
@CMofKarnataka ತಕ್ಷಣ ಅಧಿಕಾರಿಗಳ ತಂಡವನ್ನು ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಕಳಿಸಿ ನಷ್ಟದ ಅಧ್ಯಯನ ಮಾಡಿಸಿ @PMOIndia ಅವರಿಗೆ ಕಳಿಸಿಕೊಟ್ಟು ನ್ಯಾಯಯುತ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು' ಎಂದಿದ್ದಾರೆ.

ರಾಜ್ಯದ‌‌ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ @PMOIndia ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ  ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು. ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

15ನೇ ಹಣಕಾಸು ಆಯೋಗ ರಾಜ್ಯಕ್ಕೆ ರೂ.5495 ಕೋಟಿ ವಿಶೇಷ ಅನುದಾನದ ಶಿಫಾರಸು ಮಾಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ @nsitharaman ಅಡ್ಡಗಾಲು ಹಾಕಿ ಆ ಅನುದಾನ ರಾಜ್ಯಕ್ಕೆ ಸಿಗದಂತೆ ಮಾಡಿದ್ದಾರೆ. ಈ ಅನ್ಯಾಯವನ್ನು ಕೂಡಾ ರಾಜ್ಯದ ಸಚಿವರು ಇಂದಿನ‌ ಸಭೆಯಲ್ಲಿ @PMOIndia ಗಮನಕ್ಕೆ ತರಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರ ಗುರುತಿಸಿರುವ ರೈತ ಫಲಾನುಭವಿಗಳ ಸಂಖ್ಯೆ ಕೇವಲ 52 ಲಕ್ಷ ಮಾತ್ರ. ರಾಜ್ಯ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ರಾಜ್ಯದಲ್ಲಿರುವ ಒಟ್ಟು ರೈತ ಕುಟುಂಬಗಳ ಸಂಖ್ಯೆ 82 ಲಕ್ಷ. ಈ ಮಾಹಿತಿಯನ್ನು ಬಚ್ಚಿಟ್ಟು ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ @PMOIndia ಭಾನುವಾರ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್, ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ @nsitharaman ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ. ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿಯವರು ರೈತರ ದಾರಿ ತಪ್ಪಿಸಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕಳೆದ ವರ್ಷ @CMofKarnataka  ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ ವರೆಗಿನ ಹಾನಿ ಬಗ್ಗೆ ಮಾತ್ರ. ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ. ‌ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು @PMOIndia  ಅವರ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ 1,00,000 ಕೋಟಿ ರೂ.
ರಾಜ್ಯ ಸರ್ಕಾರದ ವರದಿ ಪ್ರಕಾರ ನಷ್ಟ 50,000 ಕೋಟಿ ರೂ. 
ಪರಿಹಾರ ಕೇಳಿದ್ದು 35,000 ಕೋಟಿ ರೂ.
ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ 1860 ಕೋಟಿ ರೂ. ಮಾತ್ರ.
ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

@PMOIndia ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ @BSBommai ಮತ್ತು  @RAshokaBJP ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ  ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

ಅತಿವೃಷ್ಟಿ ಬಗ್ಗೆ @PMOIndia ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ ಬಾರಿ‌ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ.
ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ (Siddaramaiah) ಆಗ್ರಹಿಸಿದ್ದಾರೆ. 

Read More