Home> Karnataka
Advertisement

ಕರ್ನಾಟಕದಲ್ಲಿಯೂ ಬಿಜೆಪಿಗೇ ಮತ್ತೆ ಅಧಿಕಾರ: ಅರುಣ್ ಸಿಂಗ್

ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಚಾರ ಮಾಡಿದಲ್ಲೆಲ್ಲ ಕಾಂಗ್ರೆಸ್ ಠೇವಣಿ ಕಳೆದುಕೊಂಡು ಹೀನಾಯ ಸೋಲು ಕಂಡಿದೆ ಎಂದು ಅರುಣ್ ಸಿಂಗ್ ಟೀಕಿಸಿದ್ದಾರೆ.

ಕರ್ನಾಟಕದಲ್ಲಿಯೂ ಬಿಜೆಪಿಗೇ ಮತ್ತೆ ಅಧಿಕಾರ: ಅರುಣ್ ಸಿಂಗ್

ಬೆಂಗಳೂರು: ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು ಗೋವಾ ರಾಜ್ಯ(5 State Election)ಗಳಲ್ಲಿ ಬಿಜೆಪಿ 2ನೇ ಬಾರಿ ಅಧಿಕಾರ ಗಳಿಸಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಕೆಕೆ ಗೆಸ್ಟ್ ಹೌಸ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ(PM Modi) ನೇತೃತ್ವದಲ್ಲಿ ಪಕ್ಷವು 4 ರಾಜ್ಯಗಳಲ್ಲಿ ಅಧಿಕಾರ ಪಡೆದಿದೆ. ಇದರಿಂದ ಕರ್ನಾಟಕದ ಕಾರ್ಯಕರ್ತರಲ್ಲೂ ಉತ್ಸಾಹ ಹೆಚ್ಚಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರ ಪಡೆಯುವುದು ಖಚಿತವೆಂದು ಭವಿಷ್ಯ ನುಡಿದರು.

ಶೋಷಿತರು, ಬಡವರು, ಹಿಂದುಳಿದ ವರ್ಗದವರು ಮತ್ತು ರೈತರ ಕಡೆ ನಮ್ಮ ಪ್ರಧಾನಿಗಳು ವಿಶೇಷ ಗಮನ ಕೊಡುತ್ತಾರೆ. ಉತ್ತರ ಪ್ರದೇಶ ಸೇರಿ ಈ 4 ರಾಜ್ಯಗಳಲ್ಲೂ ಮುಖ್ಯಮಂತ್ರಿಗಳು ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಇದರಿಂದಾಗಿ ಈ ಗೆಲುವು ನಮ್ಮದಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: CM Ibrahim: ಯುಗಾದಿ ಬಳಿಕ ದೊಡ್ಡ ಮಟ್ಟದ ರಾಜಕೀಯ ಪ್ರವಾಹ : ಸಿಎಂ ಇಬ್ರಾಹಿಂ ಭವಿಷ್ಯ

ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanaka Gandhi Vadra) ಪ್ರಚಾರ ಮಾಡಿದಲ್ಲೆಲ್ಲ ಕಾಂಗ್ರೆಸ್ ಪಕ್ಷವು ಠೇವಣಿ ಕಳೆದುಕೊಂಡು ಹೀನಾಯ ಸೋಲು ಕಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಒಡೆದ ಮನೆಯಾಗಿದೆ. ಕರ್ನಾಟಕದಲ್ಲಿ ಜನಪರ ಮತ್ತು ಜನಪ್ರಿಯ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಕೆಲಸ ಮಾಡುತ್ತಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವವೂ ಇದೆ. ಆದ್ದರಿಂದ ಇಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರ ಪಡೆಯಲಿದೆ. 150 ಸ್ಥಾನ ನಮಗೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ

ಪಕ್ಷದ ನಾಯಕತ್ವದಲ್ಲಿ ಬದಲಾವಣೆಯಾಗುತ್ತಾ..? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಿದ ಜನಪರ ಕೆಲಸಗಳನ್ನು ಮತದಾರರಿಗೆ ತಿಳಿಸಲಾಗುವುದು. ಕಾಂಗ್ರೆಸ್ ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸುತ್ತಿದೆ. ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸಿ ಗೆದ್ದು ಬರಲಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಮೀಸಲಾತಿ ಕಲ್ಪಿಸದೆ ಚುನಾವಣೆ ನಡೆಸಿದರೆ ಒಬಿಸಿ ಸಮುದಾಯಕ್ಕೆ ಅನ್ಯಾಯ : ಸಿದ್ದರಾಮಯ್ಯ

ಸಚಿವ ಸಂಪುಟ ವಿಸ್ತರಣೆ ಮತ್ತು ಸೇರ್ಪಡೆ ಆಗುವವರ ಕುರಿತು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ. ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ನಂತರವೂ ರಾಹುಲ್ ಗಾಂಧಿ ಅವರಿಗೆ ಇಲ್ಲಿ ಪ್ರಚಾರ ಮಾಡುವ ತಾಕತ್ತಿದೆಯೇ ಎಂದು ಅರುಣ್ ಸಿಂಗ್(Arun Sing) ನಗುತ್ತಲೇ ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More