ಬೆಂಗಳೂರು: ಕೇಂದ್ರ ಸರ್ಕಾರ ನಾಲ್ಕನೇ ಹಂತದ ಲಾಕ್ಡೌನ್ (Lockdown) ಜಾರಿ ಮಾಡಿ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು, ನೂತನ ಮಾರ್ಗಸೂಚಿ ಅನುಷ್ಠಾನಗೊಳಿಸುವ ವಿಷಯ ಕುರಿತಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa), ಬಳಿಕ ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು. ಪ್ರಮುಖ ಅಂಶಗಳು ಈ ರೀತಿ ಇವೆ.
* ನಾಳೆ ಬೆಳಿಗ್ಗೆಯಿಂದ ರೆಡ್ ಜೋನ್ ಹಾಗೂ ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಬಿಎಂಟಿಸಿ (BMTC), ಕೆಎಸ್ಆರ್ ಟಿಸಿ (KSRTC) ಬಸ್ ಸಂಚಾರ ಆರಂಭ.
ಇದಲ್ಲದೆ ಲಾಕ್ ಡೌನ್ ನಾಲ್ಕನೇ ಹಂತದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅಡಿ ಚೆರ್ಚೆ ನಡೆಸಿದ್ದೇವೆ. ಕೆಲವು ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೇ 31 ರವರೆಗು ಲಾಕ್ ಡೌನ್ ಮುಂದುವರಿಸಲು ನಿರ್ಧರಿಸಲಾಗಿದೆ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಭದ್ರತೆ ಮತ್ತಷ್ಟು ಹೆಚ್ಚಳ ಮಾಡಲಾಗುವುದು. ಕಾನೂನು ಬಾಹಿರ ಕೆಲಸ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ಉಪ ಮುಖ್ಯಮಂತ್ರಿಗಳಾದ ಅಶ್ವತ್ಥ್ ನಾರಯಣ್, ಲಕ್ಷ್ಮಣ್ ಸವದಿ, ಗೃಹ ಸಚಿವ ಬೊಮ್ಮಾಯಿ ಮತ್ತಿತರ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿದ್ದರು.