Home> Karnataka
Advertisement

ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಒಪ್ಪಿಗೆ: ಸಿಎಂ ಯಡಿಯೂರಪ್ಪ

ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ತೀರ್ಪು ನೀಡಿದ್ದ ನ್ಯಾಯಮಂಡಳಿಯು ರಾಜ್ಯಕ್ಕೆ 13.4 ಟಿಎಂಸಿ ನೀರು ಹಂಚಿಕೆ ಮಾಡಿ ಆದೇಶ ಹೊರಡಿಸಿತ್ತು.

ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಒಪ್ಪಿಗೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಹಸಿರು ನಿಶಾನೆ ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕಳಸಾ ಬಂಡೂರಿ ವಿವಾದ ಬಗೆಹರಿಸುವುದಾಗಿ ಭರವಸೆ ನೀಡಿದ್ದೆವು. ಅದರಂತೆ ಕೇಂದ್ರ ಸರ್ಕಾರ ಯೋಜನೆ ಆರಂಭಕ್ಕೆ ಅನುವು ಮಾಡಿ ಕೊಟ್ಟಿದೆ. ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಒಪ್ಪಿಗೆ ಸೂಚಿಸಿದೆ. ಇದರಿಂಗಾಗಿ ಯೋಜನೆ ಆರಂಭಿಸಲು ಶೇ. 90 ರಷ್ಟು ಹಾದಿ ಸುಗಮವಾಗಲಿದೆ. ಕೇಂದ್ರ ಪರಿಸರ ಇಲಾಖೆಯ ಒಪ್ಪಿಗೆ ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು. ಯೋಜನೆ ಆರಂಭಕ್ಕೆ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ವಾಸ್ತವವಾಗಿ, ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಈ ಕುರಿತು ಅ.17ರಂದು ರಾಜ್ಯ ಸರ್ಕಾರಕ್ಕೆ ಒಪ್ಪಿಗೆ ಪತ್ರ ಬರೆದಿದೆ. ಕುಡಿಯುವ ನೀರಿನ ಯೋಜನೆಗೆ ಅಗತ್ಯ ತಯಾರಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಈ ಪತ್ರದಲ್ಲಿ ಉಲ್ಲೇಖಿಸಿದೆ ಎನ್ನಲಾಗಿದೆ.  

ಏನಿದು ಮಹಾದಾಯಿ ಪ್ರಕರಣ:
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ತೀರ್ಪು ನೀಡಿದ್ದ ನ್ಯಾಯಮಂಡಳಿಯು ರಾಜ್ಯಕ್ಕೆ 13.5 ಟಿಎಂಸಿ ನೀರು ಹಂಚಿಕೆ ಮಾಡಿ ಆದೇಶ ಹೊರಡಿಸಿತ್ತು.

Read More